130 ಕಿಮೀ ವೇಗದಲ್ಲಿ ಚಲಿಸುತ್ತಿದ್ದ ರೈಲಿಗೆ ಹಠಾತ್ ಬ್ರೇಕ್ – ಇಬ್ಬರ ದುರ್ಮರಣ

Public TV
1 Min Read

ರಾಂಚಿ: ವೇಗವಾಗಿ ಚಲಿಸುತ್ತಿದ್ದ ರೈಲೊಂದು (Train) ಹಠಾತ್ ಆಗಿ ನಿಂತ ಪರಿಣಾಮ ಇಬ್ಬರು ಪ್ರಯಾಣಿಕರು ಸಾವಿಗೀಡಾದ ಘಟನೆ ಜಾರ್ಖಂಡ್‌ (Jharkhand) ಪರ್ಸಾಬಾದ್ ಎಂಬಲ್ಲಿ ನಡೆದಿದೆ.

ಪುರಿ-ನವದೆಹಲಿ ನಡುವೆ ಸಂಚರಿಸುವ ಪುರುಷೋತ್ತಮ್ ಎಕ್ಸ್‌ಪ್ರೆಸ್ ರೈಲಿಗೆ ವಿದ್ಯುತ್ ಸರಬರಾಜಾಗುವುದು ತಕ್ಷಣ ನಿಂತಿದೆ. ಈ ವೇಳೆ ವಿದ್ಯುತ್ ತಂತಿ ತುಂಡಾಗಿರುವುದು ಗಮನಕ್ಕೆ ಬಂದಿದ್ದು ಚಾಲಕ ಎಮರ್ಜನ್ಸಿ ಬ್ರೇಕ್ ಹಾಕಿದ್ದಾನೆ. ಈ ವೇಳೆ ಸುಮಾರು 130 ಕಿಮೀ ವೇಗದಲ್ಲಿ ಚಲಿಸುತ್ತಿದ್ದ ರೈಲು ತಕ್ಷಣ ನಿಂತ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.‌ ಇದನ್ನೂ ಓದಿ: ಅತಿವೃಷ್ಠಿಯಲ್ಲಿ ಬಿಎಸ್‍ವೈ ಭಿಕ್ಷೆ ಬೇಡಿದ್ದರು, ಸಿದ್ದರಾಮಯ್ಯರಂತೆ ಡ್ಯಾನ್ಸ್ ಮಾಡಿರಲಿಲ್ಲ: ಆರಗ ಜ್ಞಾನೇಂದ್ರ ವ್ಯಂಗ್ಯ

ಅಪಘಾತದ (Accident) ನಂತರ ನಾಲ್ಕು ಗಂಟೆಗಳ ಕಾಲ ರೈಲು ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಪುರುಷೋತ್ತಮ್ ಎಕ್ಸ್‌ಪ್ರೆಸ್ ರೈಲನ್ನು ಅಪಘಾತ ಸ್ಥಳದಿಂದ ಡೀಸೆಲ್ ಎಂಜಿನ್ ಮೂಲಕ ಗೋಮೊಹ್‍ಗೆ ತರಲಾಯಿತು. ನಂತರ ಎಲೆಕ್ಟ್ರಿಕ್ ಎಂಜಿನ್ ಮೂಲಕ ದೆಹಲಿಗೆ ಕಳುಹಿಸಲಾಯಿತು ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯುತ್ ತಂತಿ ತುಂಡಾಗಲು ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಐಸಿಸ್‌ ಪರ ಕೆಲಸ – ಅಲಿಗಢ ಮುಸ್ಲಿಂ ವಿವಿಯ 6 ವಿದ್ಯಾರ್ಥಿಗಳು ಅರೆಸ್ಟ್‌

Share This Article