ವಿಶ್ವ ಹಿಂದೂ ಪರಿಷತ್‌ ಮೆರವಣಿಗೆ ಮೇಲೆ ಕಲ್ಲು ತೂರಾಟ – ಹರಿಯಾಣದಲ್ಲಿ ಹಿಂಸಾಚಾರ, ಇಬ್ಬರು ಸಾವು

Public TV
2 Min Read

ಚಂಡೀಗಢ: ಹರಿಯಾಣದ (Haryana) ಮೇವತ್‌ ಪ್ರದೇಶದ ನಂದ್‌ಗ್ರಾಮ್‌ನಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆಯೋಜಿಸಲಾಗಿದ್ದ ಮೆರವಣಿಗೆ (Religious Procession) ಮೇಲೆ ಕಲ್ಲು ತೂರಾಟ ನಡೆದಿದ್ದು, ಗಲಭೆ ತೀವ್ರ ಸ್ವರೂಪ ಪಡೆದು ಹಿಂಸಾಚಾರಕ್ಕೆ ತಿರುಗಿದೆ.

ಈ ವೇಳೆ ಕಲ್ಲು ಎಸೆದು ಕಾರುಗಳಿಗೆ ಬೆಂಕಿ ಹಚ್ಚಿದ ಗುಂಪೊಂದು ಗುಂಡು ಹಾರಿಸಿ ಇಬ್ಬರು ಹೋಮ್‌ ಗಾರ್ಡ್‌ಗಳನ್ನ ಹತ್ಯೆ ಮಾಡಿದ್ದಾರೆ. ಅಲ್ಲದೇ 7 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಕಿಡಿಗೇಡಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು (Police) ಅಶ್ರುವಾಯು ಪ್ರಯೋಗಿಸಿದ್ದಾರೆ. ಇದನ್ನೂ ಓದಿ: ಲೇಡಿ ಬೌನ್ಸರ್ ಆಗಿದ್ದ ಮುಸ್ಲಿಂ ಮಹಿಳೆ ಈಗ ಶ್ರೀಕೃಷ್ಣನ ಭಕ್ತಿಯಲ್ಲಿ ಲೀನ!

ವಿಶ್ವ ಹಿಂದೂ ಪರಿಷತ್‌ (Vishwa Hindu Parishad) ಮತ್ತು ಭಜರಂಗದಳದ ಕಾರ್ಯಕರ್ತರು ಗುರುಗ್ರಾಮದಿಂದ ಶೋಭಾಯಾತ್ರೆಯನ್ನ ಆರಂಭಿಸಿದ್ದರು. ಮೆರವಣಿಗೆ ನಂದ್‌ಗ್ರಾಮ ಸಮೀಪಿಸುತ್ತಿದ್ದಂತೆ ಅನ್ಯಕೋಮಿನ ಕೆಲವರು ಯಾತ್ರೆಯನ್ನ ತಡೆದು ಕಲ್ಲು ತೂರಾಟ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಸಂಘರ್ಷ ಏರ್ಪಟ್ಟಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಭಾರೀ ಹಿಂಸಾಚಾರ ಏರ್ಪಟ್ಟಿರುವುದರಿಂದ ಸುಮಾರು 2,500 ಪುರುಷರು, ಮಹಿಳೆಯರು ಮತ್ತು ಮಕ್ಕಳು ಗುರುಗ್ರಾಮ್ ಬಳಿಯ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದಾರೆ. ಇದನ್ನೂ ಓದಿ: ಉಡುಪಿ ಕೇಸಲ್ಲಿ ಸಂತ್ರಸ್ತೆ, ಆರೋಪಿಗಳ ವಿಚಾರಣೆ- ಪ್ರಕರಣಕ್ಕೆ ಕೇರಳ ಲಿಂಕ್ ಕೊಟ್ಟು ಬಿಜೆಪಿ ಪ್ರತಿಭಟನೆ

ಭಿವಾನಿ ಹತ್ಯೆ ಪ್ರಕರಣದ ಆರೋಪಿ ಮೋನು ಮನೇಸರ್‌ ಎಂಬಾತ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿಯೇ ಸಮುದಾಯ ಆಕ್ರೋಶ ವ್ಯಕ್ತಪಡಿಸಿ, ಕಲ್ಲುತೂರಾಟಕ್ಕೆ ಮುಂದಾಗಿದೆ ಎನ್ನಲಾಗಿದೆ. ಮತ್ತೊಂದೆಡೆ ಬಜರಂಗದಳದ ಕಾರ್ಯಕರ್ತರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ವೀಡಿಯೋ ಪೋಸ್ಟ್‌ ಮಾಡಿದ್ದಕ್ಕೆ ಸಂಬಂಧಿಸಿದಂತೆ ಗಲಭೆ ನಡೆದಿದೆ ಎಂದೂ ಹೇಳಲಾಗುತ್ತಿದೆ.

ಇಂಟರ್ನೆಟ್‌ ಬಂದ್‌, 144 ನಿಷೇಧಾಜ್ಞೆ ಜಾರಿ:
ಗಲಭೆಯ ವಿಡಿಯೊ ಜಾಲತಾಣಗಳಲ್ಲೂ ಹರಿದಾಡುತ್ತಿದ್ದು ಸಂಘರ್ಷ ಮತ್ತಷ್ಟು ವಿಕೋಪಕ್ಕೆ ಹೋಗುವುದನ್ನು ತಡೆಯಲು ಆಗಸ್ಟ್‌ 2ರವರೆಗೆ ಹರ್ಯಾಣದ ನಹ್‌ ಜಿಲ್ಲೆಯಲ್ಲಿ ಅಂಜರ್ತಾಲ ಸೇವೆ ಸ್ಥಗಿತಗೊಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಸೆಕ್ಷನ್‌ 144 ನಿಷೇಧಾಜ್ಞೆ ಜಾರಿಗೊಳಿಸಿದ್ದು, ಸಾರ್ವಜನಿಕರು ಪೊಲೀಸರು ಘಟನೆ ಹತ್ತಿಕ್ಕಲು ಶತಪ್ರಯತ್ನ ನಡೆಸುತ್ತಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್