– ಮೃತರಿಗೆ ತಲಾ 5 ಲಕ್ಷ, ಗಾಯಾಳುಗಳಿಗೆ 2 ಲಕ್ಷ ಪರಿಹಾರ ಘೋಷಿಸಿದ ಆಂಧ್ರ ಸಾರಿಗೆ ಸಚಿವ
ನವದೆಹಲಿ/ಹೈದರಾಬಾದ್: ಆಂಧ್ರದ ಕರ್ನೂಲಿನಲ್ಲಿ (Karnool) ನಡೆದ ಭೀಕರ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಧನ ಘೋಷಿಸಿದೆ.
ಗುರುವಾರ (ಅ.23) ಮಧ್ಯರಾತ್ರಿ 3ರ ಸುಮಾರಿಗೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಬಸ್ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದು, 24 ಜನರು ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಈ ಕುರಿತು ಪಿಎಂ ಕಚೇರಿ (PMO) ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪಿಎಂ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ನೀಡುವುದಾಗಿ ತಿಳಿಸಿದೆ.ಇದನ್ನೂ ಓದಿ: Kurnool Bus Fire | ಬೆಂಕಿ ವ್ಯಾಪಿಸಲು ಬೆಂಗಳೂರಿಗೆ ಸಾಗಿಸುತ್ತಿದ್ದ ಮೊಬೈಲ್ ಫೋನ್‌ಗಳು ಒಟ್ಟಾಗಿ ಸ್ಫೋಟಿಸಿದ್ದೂ ಕಾರಣ!
Extremely saddened by the loss of lives due to a mishap in Kurnool district of Andhra Pradesh. My thoughts are with the affected people and their families during this difficult time. Praying for the speedy recovery of the injured.
An ex-gratia of Rs. 2 lakh from PMNRF would be…
— PMO India (@PMOIndia) October 24, 2025
ಈ ಕುರಿತು ಆಂಧ್ರಪ್ರದೇಶ ಸಾರಿಗೆ ಸಚಿವ ರಾಮ್ ಪ್ರಸಾದ್ ರೆಡ್ಡಿ (Ram Prasad Reddy) ಮಾತನಾಡಿ, ಇದು ಹಳೆಯ ಬಸ್ ಆಗಿದ್ದ ಕಾರಣ ಇದರಲ್ಲಿ ಸ್ವಯಂಚಾಲಿತ ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆ ಇರಲಿಲ್ಲ ಎಂದು ಹೇಳಿದ್ದಾರೆ. ಜೊತೆಗೆ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಹೈದ್ರಾಬಾದ್‌ನಿಂದ ಬೆಂಗಳೂರಿಗೆ ಬರ್ತಿದ್ದ ಖಾಸಗಿ ಎಸಿ ಬಸ್ ಆಂಧ್ರದ ಕರ್ನೂಲ್ ಬಳಿ ಬೈಕ್‌ವೊಂದಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತವಾದ ಬಳಿಕವೂ ಡ್ರೈವರ್ ಬಸ್ ನಿಲ್ಲಿಸದೇ ಸವಾರನ ಸಮೇತ ಬೈಕ್ ಅನ್ನು ಸುಮಾರು 300 ಮೀಟರ್ ಎಳೆದೊಯ್ದಿದ್ದಾನೆ. ಈ ವೇಳೆ, ಬೈಕ್‌ನಲ್ಲಿದ್ದ ಪೆಟ್ರೋಲ್ ಚೆಲ್ಲಿ ಬಸ್ ಅಡಿ ಬೆಂಕಿ ಹೊತ್ತಿಕೊಂಡಿದೆ. ನಂತರ ಇಡೀ ಬಸ್‌ಗೆ ಬೆಂಕಿ ಹಬ್ಬಿದೆ. ಎಸಿ ಬಸ್ ಆಗಿದ್ದ ಕಾರಣ ಕ್ಷಣಾರ್ಧದಲ್ಲಿ ಇಡೀ ಬಸ್‌ಗೆ ಬೆಂಕಿ ಆವರಿಸಿದೆ.
ಮುಂಜಾನೆ 3 ಗಂಟೆ ಸುಮಾರಿನಲ್ಲಿ ದುರಂತ ಸಂಭವಿಸಿದ್ದು, ಪ್ರಯಾಣಿಕರು ನಿದ್ದೆಯಲ್ಲಿದ್ದರು. ಹೀಗಾಗಿ, 20 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದರೂ ಕೂಡ ಸುಟ್ಟಗಾಯಗಳಿಂದಾಗಿ ಒದ್ದಾಡುತ್ತಿದ್ದಾರೆ. ದುರಂತಕ್ಕೆ ತೆಲಂಗಾಣ-ಆಂಧ್ರಪ್ರದೇಶ-ಕರ್ನಾಟಕದ ಮುಖ್ಯಮಂತ್ರಿಗಳು, ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.ಇದನ್ನೂ ಓದಿ: ಡ್ರೈವರ್, ಕಂಡಕ್ಟರ್ ಬೆಂಕಿ ನಂದಿಸ್ತಿದ್ದರು, 5 ಸೆಕೆಂಡ್‌ಲ್ಲಿ ಜೀವ ಉಳಿಸಿಕೊಂಡ್ವಿ – ಪ್ರಾಣಾಪಾಯದಿಂದ ಪಾರಾದ ಆಕಾಶ್ ಮಾತು
