ಬಾಲಿವುಡ್ (Bollywood) ನಟಿ ದಿಶಾ ಪಟಾನಿ (Disha Patani) ಅವರ ಮನೆ ಬಳಿ ಇತ್ತೀಚೆಗೆ ನಡೆದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ದುಷ್ಕರ್ಮಿಗಳು ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ರೋಹ್ಟಕ್ ಮೂಲದ ರವೀಂದ್ರ ಅಲಿಯಾಸ್ ಕಲ್ಲು ಮತ್ತು ಹರಿಯಾಣದ ಸೋನಿಪತ್ ನಿವಾಸಿ ಅರುಣ್ ಹತ್ಯೆಯಾಗಿದ್ದಾರೆ. ಇಬ್ಬರೂ ಗೋಲ್ಡಿ ಬ್ರಾರ್ ಗ್ಯಾಂಗ್‌ನ ಸಕ್ರಿಯ ಸದಸ್ಯರಾಗಿದ್ದರು. ಜೊತೆಗೆ ಬಹು ಕ್ರಿಮಿನಲ್ ಪ್ರಕರಣಗಳಲ್ಲಿ ಮೋಸ್ಟ್ ವಾಂಟೆಡ್‌ಗಳಾಗಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ʻಇದಿನ್ನೂ ಟ್ರೈಲರ್ʼ ಗೋಲ್ಡಿ ಬ್ರಾರ್ ಗ್ಯಾಂಗ್ ವಾರ್ನಿಂಗ್
ಇಂದು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (STF)ಯ ನೋಯ್ಡಾ ಘಟಕ ಹಾಗೂ ದೆಹಲಿ ಪೊಲೀಸರ ಅಪರಾಧ ಗುಪ್ತಚರ (CI) ಘಟಕ ಜಂಟಿಯಾಗಿ ಕಾರ್ಯಾಚರಣೆಗೆ ಇಳಿದಿತ್ತು. ಈ ವೇಳೆ ಮುಂಭಾಗದಲ್ಲಿದ್ದ ಪೊಲೀಸ್ ಘಟಕದ ಮೇಲೆ ಶಂಕಿತರು ಗುಂಡಿನ ದಾಳಿಗೆ ಮುಂದಾದ್ರು, ಬಳಿಕ ಪೊಲೀಸರು ಪ್ರತಿದಾಳಿ ನಡೆಸಿದರು. ಈ ವೇಳೆ ಗಾಯಗೊಂಡಿದ್ದ ಶಂಕಿತರು ಬಳಿಕ ಸಾವನ್ನಪ್ಪಿದರು. ಘಟನಾ ಸ್ಥಳದಿಂದ, ಅಧಿಕಾರಿಗಳು ಗ್ಲಾಕ್ ಪಿಸ್ತೂಲ್, ಜಿಗಾನಾ ಪಿಸ್ತೂಲ್ ಮತ್ತು ಬಹು ಲೈವ್ ಕಾರ್ಟ್ರಿಡ್ಜ್‌ಗಳು ಸೇರಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
ದಿಶಾ ಪಟಾನಿ ಮನೆ ಬಳಿ ಏನಾಗಿತ್ತು?
ಉತ್ತರ ಪ್ರದೇಶದ ಬರೇಲಿಯಲ್ಲಿರುವ ಬಾಲಿವುಡ್ ನಟಿ ದಿಶಾ ಪಟಾನಿ ಅವರ ಮನೆ ಹೊರಗೆ ಇದೇ ಸೆ.12ರಂದು ಬೆಳಗ್ಗಿನ ಜಾವ 3:30ರ ಸುಮಾರಿಗೆ ಗುಂಡಿನ ದಾಳಿ ನಡೆದಿತ್ತು. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮೂರರಿಂದ ನಾಲ್ಕು ಸುತ್ತು ಗುಂಡು (Fire) ಹಾರಿಸಿ ಎಸ್ಕೇಪ್ ಆಗಿದ್ದರು. ಗುಂಡಿನ ದಾಳಿ ನಡೆದ ಮನೆಯಲ್ಲಿ ದಿಶಾ ಪಟಾನಿ ಕುಟುಂಬ ವಾಸವಿತ್ತು. ಆ ಸಮಯದಲ್ಲಿ ದಿಶಾ ಅವರ ತಂದೆ ನಿವೃತ್ತ ಉಪ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್ ಸಿಂಗ್ ಪಟಾನಿ, ತಾಯಿ ಅಕ್ಕ ಖುಷ್ಬು ಪಟಾನಿ ಇದ್ದರು. ಬಳಿಕ ಗೋಲ್ಡಿ ಬ್ರಾರ್ ಗ್ಯಾಂಗ್ ಗುಂಡಿನ ದಾಳಿ ಹೊಣೆ ಹೊತ್ತುಕೊಂಡಿತ್ತು. ಇದನ್ನೂ ಓದಿ: ʻಕೊತ್ತಲವಾಡಿʼ ಕಿರಿಕ್ – ಸಹನಟಿ ಸ್ವರ್ಣ ವಿರುದ್ಧ ದೂರು ದಾಖಲು
ಗುಂಡಿನ ದಾಳಿಗೆ ಕಾರಣ ಏನು?
ದಾಳಿ ಹೊಣೆ ಗೊತ್ತಿದ್ದ ಗೋಲ್ಡಿ ಬ್ರಾರ್ ಗ್ಯಾಂಗ್ ಅದಕ್ಕೆ ಕಾರಣ ಉಲ್ಲೇಖಿಸಿ ಪತ್ರವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿತ್ತು. ʻಎಲ್ಲಾ ಸಹೋದರರಿಗೆ ರಾಮ್ ರಾಮ್… ನಾನು, ವೀರೇಂದ್ರ ಚರಣ್, ಮಹೇಂದ್ರ ಶರಣ್ (ದೆಲಾನಾ). ಸಹೋದರರೇ, ಇಂದು ಖುಷ್ಬೂ ಪಟಾನಿ/ದಿಶಾ ಪಟಾನಿ (ಬಾಲಿವುಡ್ ನಟಿ) ಮನೆಯಲ್ಲಿ (ವಿಲ್ಲಾ ನಂ. 40, ಸಿವಿಲ್ ಲೈನ್ಸ್, ಬರೇಲಿ, ಯುಪಿ) ನಡೆದ ಗುಂಡಿನ ದಾಳಿಯನ್ನು ನಾವು ಮುಗಿಸಿದ್ದೇವೆ. ಅವರು ನಮ್ಮ ಪೂಜ್ಯ ಸಂತರನ್ನು (ಪ್ರೇಮಾನಂದ ಜಿ ಮಹಾರಾಜ್ ಮತ್ತು ಅನಿರುದ್ಧಾಚಾರ್ಯ ಜಿ ಮಹಾರಾಜ್) ಅವಮಾನಿಸಿದ್ದಾರೆ. ಅಲ್ಲದೇ ನಮ್ಮ ಸನಾತನ ಧರ್ಮವನ್ನು ಅವಮಾನಿಸಲು ಪ್ರಯತ್ನಿಸಿದರು. ನಮ್ಮ ದೇವತೆಗಳ ಮೇಲಿನ ಅವಮಾನ ಸಹಿಸಲಾಗದು. ಇದು ಕೇವಲ ಟ್ರೈಲರ್ ಅಷ್ಟೇ. ಮುಂದಿನ ಬಾರಿ, ಅವರು ಅಥವಾ ಬೇರೆ ಯಾರಾದರೂ ನಮ್ಮ ಧರ್ಮದ ಬಗ್ಗೆ ಅಗೌರವ ತೋರಿಸಿದ್ರೆ, ಅವರ ಮನೆಯಲ್ಲಿ ಯಾರೂ ಜೀವಂತವಾಗಿ ಉಳಿಯುವುದಿಲ್ಲ ಎಂದು ಎಚ್ಚರಿಕೆ ನೀಡಿತ್ತು.