ರಾಮೇಶ್ವರಂ ಕೆಫೆ ಬಾಂಬರ್ ಪಶ್ಚಿಮ ಬಂಗಾಳದಲ್ಲಿ ಅರೆಸ್ಟ್

Public TV
1 Min Read

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಬಾಂಬ್ ಇಟ್ಟು ಪಶ್ಚಿಮ ಬಂಗಾಳದಲ್ಲಿ (West Bengal) ತಲೆಮರೆಸಿಕೊಂಡಿದ್ದ ಇಬ್ಬರು ಉಗ್ರರನ್ನು ಎನ್‍ಐಎ ಅಧಿಕಾರಿಗಳು ಕೊನೆಗೂ ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಕೃತ್ಯ ಎಸಗಿ ಮುಸಾವೀರ್ ಹುಸೇನ್ ತಲೆಮರೆಸಿಕೊಂಡಿದ್ದು, ಕೋಲ್ಕತ್ತಾಕ್ಕೆ ಹಾರಿ ಅಡಗಿದ್ದ. ಕೋಲ್ಕತ್ತಾದ ಪೂರ್ವ ಮಿಡ್ನಾಪುರ ದಿಘಾ ಮನೆಯಲ್ಲಿ ಅಡಗಿದ್ದ ಬಾಂಬರ್ ಮುಸಾವೀರ್ ನನ್ನು ಇದೀಗ ಬಂಧಿಸಲಾಗಿದೆ. ಈತನ ಜೊತೆಗೆ ಅಡಗಿದ್ದ ಅಬ್ದುಲ್ ಮತೀನ್ ನನ್ನು ಕೂಡ ಅರೆಸ್ಟ್ ಮಾಡಲಾಗಿದೆ. ಈತ ಮುಸಾವೀರ್ ಗೆ ಸಂಚು ನಡೆಸಲು ನೆರವು ನೀಡಿದ್ದ.

ಯಾರಿಗೂ ಗುರುತು ಸಿಗದಂತೆ ತಲೆಮರೆಸಿಕೊಂಡಿದ್ದ ಇವರಿಬ್ಬರು ನಕಲಿ ದಾಖಲೆ ನೀಡಿ ಕೋಲ್ಕತ್ತಾದಲ್ಲಿ ವಾಸ್ತವ್ಯ ಹೂಡಿದ್ದರು. ಮನೆಯಲ್ಲಿ ವಾಸ್ತವ್ಯ ಮುನ್ನ ಚೀಪ್ ರೇಟ್ ಲಾಡ್ಜ್ ಗಳಲ್ಲಿ ಉಳಿದುಕೊಳ್ಳುತ್ತಿದ್ದರು. ಇದೀಗ ಖಚಿತ ಮಾಹಿತಿಯನ್ನಾಧರಿಸಿ ಎನ್‍ಐಎ ಟೀಂ ನಸುಕಿನ ಜಾವ 2.30 ರ ವೇಳೆಗೆ  ದಾಳಿ ನಡೆಸಿ ಇಬ್ಬರು ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಇದನ್ನೂ ಓದಿ: ರಾಮನಗರಲ್ಲಿ 30 ಕೆಜಿಗೂ ಅಧಿಕ ಪ್ರಮಾಣದ ಚಿನ್ನ; ದಾವಣಗೆರೆಯಲ್ಲಿ 12.50 ಕೋಟಿ ರೂ. ಮೌಲ್ಯದ ಚಿನ್ನಾಭರಣ, ವಜ್ರ ಜಪ್ತಿ!

Share This Article