ಬೆಂಗಳೂರು: 8 ದಿನ ಪ್ರೇಯಸಿ ಜೊತೆಗಿದ್ದು ಬಳಿಕ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಲಾಡ್ಜ್‌ವೊಂದರಲ್ಲಿ ನಡೆದಿದೆ.
ಮೃತ ಯುವಕನನ್ನು ಪುತ್ತೂರು ಮೂಲದ ತಕ್ಷಿತ್ (20) ಎಂದು ಗುರುತಿಸಲಾಗಿದೆ.
ಶುಕ್ರವಾರ (ಅ.18) ಯುವಕ ಸಾವನ್ನಪ್ಪಿದ್ದು, ಬೆಳಗ್ಗೆ ಲಾಡ್ಜ್ ಸಿಬ್ಬಂದಿ ರೂಂ ಬಾಗಿಲು ತೆಗೆದಾಗ ಘಟನೆ ಬೆಳಕಿಗೆ ಬಂದಿದೆ. ಕಳೆದ ವಾರ ತನ್ನ ಪ್ರೇಯಸಿಯೊಂದಿಗೆ ಬೆಂಗಳೂರಿಗೆ ಬಂದಿದ್ದ. ತಕ್ಷಿತ್ ಆನ್‌ಲೈನ್ ಮೂಲಕ ಮಡಿವಾಳದಲ್ಲಿರುವ ಲಾಡ್ಜ್‌ವೊಂದರಲ್ಲಿ ರೂಂ ಬುಕ್ ಮಾಡಿದ್ದ. ಎಂಟು ದಿನ ಲಾಡ್ಜ್‌ನಲ್ಲಿ ಪ್ರೇಯಸಿಯೊಂದಿಗೆ ಇದ್ದ. ಗುರುವಾರ ಯುವತಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಆಕೆ ವಿರಾಜಪೇಟೆಗೆ ಹೋಗಿದ್ದಳು. ಹುಡುಗಿ ಹೋದ ಮರುದಿನವೇ ಯುವಕ ಮೃತಪಟ್ಟಿದ್ದಾನೆ.
ಸದ್ಯ ತಕ್ಷಿತ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಯುವಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.