2024ರ ಲೋಕಸಭೆ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಹೊರ ಬರಲಿದೆ – ರಾಹುಲ್ ಗಾಂಧಿ

Public TV
2 Min Read

ವಾಷಿಂಗ್ಟನ್‌: ಮುಂದಿನ ಎರಡು ವರ್ಷಗಳ ಕಾಲ ಕಾಂಗ್ರೆಸ್ (Congress) ಅತ್ಯುತ್ತಮವಾಗಿ ಕಾರ್ಯನಿರ್ವಹಿಸಲಿದೆ ಎಂದು ನಾನು ಭಾವಿಸಿದ್ದು, ದೇಶದಲ್ಲಿ ಅಂಡರ್ ಕರೆಂಟ್ ಇದ್ದು 2024ರ ಲೋಕಸಭೆ ಚುನಾವಣೆಯಲ್ಲಿ (2024 Parliament Elections) ಅಚ್ಚರಿಯ ಫಲಿತಾಂಶ ಹೊರ ಬರಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಾಷಿಂಗ್ಟನ್ ಡಿಸಿಯಲ್ಲಿ ಪ್ರಸುತ್ತ ರಾಜಕಾರಣ ಬಗ್ಗೆ ಮಾತನಾಡಿದ ಅವರು, ಭಾರತದಲ್ಲಿ ವಿಪಕ್ಷಗಳನ್ನು ಕಾಂಗ್ರೆಸ್ ಒಗ್ಗೂಡಿಸುತ್ತಿದೆ. ಕಾಂಗ್ರೆಸ್ ಮಾಜಿ ಅಧ್ಯಕ್ಷರ ಪ್ರಯತ್ನ ಸಫಲವಾಗಲಿದೆ ಎಂದು ನಾನು ಭಾವಿಸಿದ್ದೇನೆ, ಸಾಕಷ್ಟು ಒಳ್ಳೆಯ ಕೆಲಸಗಳು ನಡೆಯುತ್ತಿವೆ ಎಂದರು‌.

ಕರ್ನಾಟಕ ವಿಧಾನಸಭಾ ಚುನಾವಣೆಯ (Karnaraka Assembly Election) ಫಲಿತಾಂಶ ಉಲ್ಲೇಖಿಸಿ ಮಾತನಾಡಿ, ಕಾಂಗ್ರೆಸ್ ಬಿಜೆಪಿಯನ್ನು (BJP) ಅಧಿಕಾರದಿಂದ ಕೆಳಗಿಳಿಸಿದೆ. ಮುಂದಿನ ಮೂರ್ನಾಲ್ಕು ರಾಜ್ಯಗಳ ಚುನಾವಣೆಗಳು ಏನಾಗಲಿದೆ ಎಂಬುದನ್ನ ಕಾದು ನೋಡಿ ಎಂದು ಹೇಳಿದರು. ಇದನ್ನೂ ಓದಿ: ಸಂಸದ ಸ್ಥಾನದಿಂದ ಅನರ್ಹತೆ ಜನ ಸೇವೆಗೆ ಸಿಕ್ಕ ಅವಕಾಶ: ರಾಹುಲ್ ಗಾಂಧಿ

ಬಹುಪಾಲು ಸಮಾನ ಮನಸ್ಕ ಹಲವು ವಿರೋಧ ಪಕ್ಷಗಳು 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವನ್ನು ಎದುರಿಸಲು ಕೈಜೋಡಿಸುತ್ತಿವೆ. ಅಧಿಕಾರದಲ್ಲಿರುವ ಬಿಜೆಪಿ ವಿರುದ್ಧ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ, ಜೂನ್ 12 ರಂದು ಪಾಟ್ನಾದಲ್ಲಿ ʻಸಮಾನ ಮನಸ್ಸಿನ ರಾಜಕೀಯ ಪಕ್ಷಗಳʼ ಸಮಾವೇಶ ನಡೆಯಲಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಭೆಯ ಅಧ್ಯಕ್ಷತೆ ವಹಿಸುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಇನ್ನೂ ಲೋಕಸಭೆ ಸ್ಪರ್ಧೆಯಲ್ಲಿ ಕಾಂಗ್ರೆಸ್ ಮತ್ತು ವಿಪಕ್ಷಗಳ ನಡುವೆ ಕೊಡು-ಕೊಳ್ಳುವಿಕೆ ಕೂಡಾ ಇರಲಿದೆ ಎಂದ ಅವರು, ಭಾರತದಲ್ಲಿ ಪತ್ರಿಕಾ ಮತ್ತು ಧಾರ್ಮಿಕ ಸ್ವಾತಂತ್ರ್ಯಗಳು, ಅಲ್ಪಸಂಖ್ಯಾತರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಆರ್ಥಿಕತೆಯ ಸ್ಥಿತಿ ಸೇರಿದಂತೆ ಹಲವಾರು ಪ್ರಶ್ನೆಗಳಿಗೆ ರಾಹುಲ್ ಗಾಂಧಿ ಉತ್ತರಿಸಿದರು. ಇದನ್ನೂ ಓದಿ: ಬೇಕಂತಲೇ ಹೆಣ್ಮಕ್ಕಳ ಮೈ ಮುಟ್ಟುತ್ತಿದ್ದ, ಹಿಂಬಾಲಿಸುತ್ತಿದ್ದ – ಬ್ರಿಜ್‌ ಭೂಷಣ್‌ ವಿರುದ್ಧ 10 ಕಂಪ್ಲೆಂಟ್‌, 2 FIR

ಪ್ರಧಾನಿ ನರೇಂದ್ರ ಮೋದಿಯವರ ವಿಶ್ವದಾದ್ಯಂತ ಉನ್ನತ ಮಟ್ಟದ ಜನಪ್ರಿಯತೆ ಬಗ್ಗೆ ಮಾತನಾಡಿ, ದೇಶದ ಸಾರ್ವಜನಿಕ ಸಂಸ್ಥೆಗಳನ್ನು ಸೆರೆಹಿಡಿಯಲಾಗಿದೆ. ದೇಶದಲ್ಲಿ ಪತ್ರಿಕಾ ಮಾಧ್ಯಮವನ್ನ ಖಚಿತವಾಗಿ ಸೆರೆ ಹಿಡಿಯಲಾಗಿದೆ ಎಲ್ಲವನ್ನೂ ನಾನು ನಂಬುವುದಿಲ್ಲ ಎಂದರಲ್ಲದೇ, ಪ್ರಜಾಪ್ರಭುತ್ವಕ್ಕೆ ಪತ್ರಿಕಾ ಸ್ವಾತಂತ್ರ್ಯವು ತುಂಬಾ ಮುಖ್ಯವಾಗಿದೆ ಎಂದು ಒತ್ತಿ ಹೇಳಿದರು.

Share This Article