ಮನೆಯ ಬಾತ್‌ ರೂಂನಲ್ಲಿ ಯುವತಿ ಅನುಮಾನಾಸ್ಪದ ಸಾವು

Public TV
0 Min Read

ಬೆಂಗಳೂರು: ಯುವತಿ ಅನುಮಾನಾಸ್ಪದವಾಗಿ (Suspicious Death) ಮನೆಯಲ್ಲೇ ಸಾವನ್ನಪ್ಪಿದ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ (Subramanyapura Police Station) ವ್ಯಾಪ್ತಿಯಲ್ಲಿ ನಡೆದಿದೆ.

ಪ್ರಭುಧ್ಯಾ(21) ಸಾವನ್ನಪ್ಪಿರುವ ಯುವತಿ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾ ಶವ ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಬುಧವಾರ ಸಂಜೆ ಈ ಘಟನೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಅಸಹಜ ಸಾವು ಅಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Share This Article