ಬಳ್ಳಾರಿ ಜಿಲ್ಲೆಯಲ್ಲಿ 8 ತಿಂಗಳ ಅವಧಿಯಲ್ಲಿ 23 ಬಾಣಂತಿಯರ ಸಾವು

Public TV
1 Min Read

– ಸರ್ಕಾರಕ್ಕೆ ಜಿಲ್ಲಾಡಳಿತ ಸಲ್ಲಿಸಿದ ಆಡಿಟ್ ರಿಪೋರ್ಟ್‌ನಲ್ಲಿ ಬಯಲು

ಬಳ್ಳಾರಿ: ಜಿಲ್ಲೆಯಲ್ಲಿ ಬಾಣಂತಿಯರ (Maternal Death) ಸರಣಿ ಸಾವಿನ ಬಳಿಕ ಮತ್ತೊಂದು ವಿಚಾರ ಬೆಳಕಿಗೆ ಬಂದಿದೆ. ಜಿಲ್ಲೆಯಲ್ಲಿ 8 ತಿಂಗಳ ಅವಧಿಯಲ್ಲಿ 23 ಬಾಣಂತಿಯರ ಸಾವಾಗಿರುವ ಬಗ್ಗೆ ಸರ್ಕಾರಕ್ಕೆ ಜಿಲ್ಲಾಡಳಿತ ಸಲ್ಲಿಸಿದ ಆಡಿಟ್ ರಿಪೋರ್ಟ್‌ನಲ್ಲಿ (Audit Report) ಬೆಳಕಿಗೆ ಬಂದಿದೆ.

ಜಿಲ್ಲೆಯಲ್ಲಿ ಏಪ್ರಿಲ್‌ನಿಂದ ಈವರೆಗೂ 23 ಬಾಣಂತಿಯರ ಸಾವಾಗಿದೆ. ಜಿಲ್ಲಾಸ್ಪತ್ರೆ, ವಿಮ್ಸ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬಾಣಂತಿಯರ ಸಾವಿನ ಬಗ್ಗೆ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ (Prashanth Kumar Mishra) ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಆ ರೀತಿ ಹೇಳಿಲ್ಲ ಅನ್ನೋದಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ – ಸಿ.ಟಿ ರವಿಗೆ ಲಕ್ಷ್ಮಿ ಹೆಬ್ಬಾಳ್ಕರ್‌ ಸವಾಲ್‌

ಹೆರಿಗೆ ಸಂದರ್ಭದಲ್ಲಿ ಬಾಣಂತಿಯರಿಗೆ ಅಪೌಷ್ಟಿಕತೆ, ಅನಿಮಿಯಾ ಇತರೆ ಕಾಯಿಲೆಗಳು ಕಾಡುತ್ತಿವೆ. ಹೀಗಾಗಿ ಸಿಜೇರಿಯನ್ ಆಗುವ ಬಾಣಂತಿಯರೇ ಹೆಚ್ಚು ಸಾವನ್ನಪ್ಪುತ್ತಿದ್ದಾರೆ. ಬಾಣಂತಿಯರ ಸಾವಿಗೆ ಕಡಿವಾಣ ಹಾಕಲು ವಿಶೇಷ ಕ್ರಮ ಕೈಗೊಳ್ಳುತ್ತೇವೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ಸಿ.ಟಿ ರವಿ ಪ್ರಕರಣ ಸಿಐಡಿಗೆ ಒಪ್ಪಿಸಲಾಗಿದೆ: ಪರಮೇಶ್ವರ್

Share This Article