ಕೊರೊನಾ ಸೋಂಕಿನಿಂದ 23 ವರ್ಷದ ಯುವತಿ ಗುಣಮುಖ

Public TV
1 Min Read

ಕಲಬುರಗಿ: ಕೊರೊನಾ ಸೋಂಕಿಗೆ ತುತ್ತಾಗಿ ಇಎಸ್‍ಐಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಲಬುರಗಿ ನಗರದ 23 ವರ್ಷದ ಯುವತಿ (ರೋಗಿ-302) ಗುಣಮುಖವಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಅವರನ್ನು ಅಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ ತಿಳಿಸಿದ್ದಾರೆ.

ರೋಗಿ ಸಂಖ್ಯೆ-274 ಸಂಪರ್ಕಕ್ಕೆ ಬಂದ ಪರಿಣಾಮ ಯುವತಿಗೆ ಏಪ್ರಿಲ್ 7 ರಂದು ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಆಕೆಯನ್ನು ಇಎಸ್‍ಐಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಎಂದರು.

ಕಲಬುರಗಿ ಜಿಲ್ಲೆಯಲ್ಲಿ ಇದೂವರೆಗೆ ಕೊರೊನಾ ಪಾಸಿಟಿವ್ ಪತ್ತೆಯಾದ 52 ಜನರಲ್ಲಿ ಒಟ್ಟು 8 ಜನ ರೋಗಿಗಳು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದಂತೆ 5 ಜನ ನಿಧನ ಹೊಂದಿದ್ದು, 39 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿ.ಸಿ ಮಾಹಿತಿ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *