ಇಂದು 236 ಪಾಸಿಟಿವ್, 7 ಸಾವು – 7,236 ಸಕ್ರಿಯ ಪ್ರಕರಣ

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 236 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 7 ಮರಣ ಪ್ರಕರಣ ದಾಖಲಾಗಿದೆ. ಈ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 7,236ಕ್ಕೆ ಏರಿಕೆ ಕಂಡಿದೆ.

ರಾಜ್ಯದಲ್ಲಿ 321 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಈವರೆಗೆ ರಾಜ್ಯದಲ್ಲಿ ಒಟ್ಟು 30,00,671 ಮಂದಿಗೆ ಕೊರೊನಾ ಬಂದಿದೆ. 29,55,138 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.96 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.29 ರಷ್ಟಿದೆ. ಇಂದು ಬೆಂಗಳೂರು ನಗರದಲ್ಲಿ 4, ಬೆಳಗಾವಿ, ಬಳ್ಳಾರಿ ಮತ್ತು ಕೋಲಾರದಲ್ಲಿ ತಲಾ 1 ಸಾವು ಸೇರಿ ಒಟ್ಟು 7 ಸಾವು ಸಂಭವಿಸಿದೆ. ಇದನ್ನೂ ಓದಿ: ಧಾರವಾಡ ಎಸ್‍ಡಿಎಂ ಕಾಲೇಜಿನ ಎಲ್ಲಾ ಸೋಂಕಿತರು ಡಿಸ್ಚಾರ್ಜ್

ರಾಜ್ಯದಲ್ಲಿ ಇಂದು ಒಟ್ಟು 2,65,191 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 80,217 ಸ್ಯಾಂಪಲ್ (ಆರ್‌ಟಿಪಿಸಿಆರ್ 70,719 + 9,498 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಕೇರಳದಲ್ಲಿ ಮೊದಲ ಓಮಿಕ್ರಾನ್ ಪ್ರಕರಣ ಪತ್ತೆ

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 121, ಬೀದರ್ 1, ಚಾಮರಾಜನಗರ 3, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 9, ಚಿತ್ರದುರ್ಗ 2, ದಕ್ಷಿಣ ಕನ್ನಡ 19, ದಾವಣಗೆರೆ 0, ಧಾರವಾಡ 2, ಗದಗ 0, ಹಾಸನ 10, ಹಾವೇರಿ 0, ಕಲಬುರಗಿ 3, ಕೊಡಗು 35, ಕೋಲಾರ 2, ಕೊಪ್ಪಳ 0, ಮಂಡ್ಯ 3, ಮೈಸೂರು 13, ರಾಯಚೂರು 0, ರಾಮನಗರ 2, ಶಿವಮೊಗ್ಗ 2, ತುಮಕೂರು 5, ಉಡುಪಿ 3, ಉತ್ತರ ಕನ್ನಡ 3, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *