ಬೆಂಗಳೂರು: ಕೆಲಸಕ್ಕೆ ಹೋಗುತ್ತಿದ್ದ ಯುವತಿ ಅಪಘಾತದಿಂದ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.
ಮಂಡ್ಯದ ತರೀಕೆರೆ ಮೂಲದ ಸುಮಾ (25) ಮೃತ ದುರ್ದೈವಿ. ಹೆಬ್ಬಾಳದ ಬ್ಯಾಂಕ್ ಒಂದರಲ್ಲಿ ಯುವತಿ ಕೆಲಸ ಮಾಡುತ್ತಿದ್ದರು. ಡ್ಯೂಟಿಗೆ ಹೋಗಲು ಬಂದಿದ್ದ ವೇಳೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ದೆಹಲಿಯ 50, ಬೆಂಗ್ಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ
ಕೆಲಸದ ಹಿನ್ನೆಲೆ ಕಳೆದ ಮೂರು ವರ್ಷದಿಂದ ಬೆಂಗಳೂರಿನಲ್ಲಿ ಸುಮಾ ವಾಸವಾಗಿದ್ದರು. ಬೆಳಗ್ಗೆ ಕೆಲಸಕ್ಕೆ ಹೋಗಲು ಬಂದಾಗ ದುರಂತ ಸಂಭವಿಸಿದೆ. ಖಾಸಗಿ ಆಸ್ಪತ್ರೆಯಲ್ಲಿ ಯುವತಿ ಮೃತದೇಹ ಇದೆ.
ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಊರಿನಿಂದ ಸ್ಥಳಕ್ಕೆ ದೌಡಾಯಿಸಿದ್ದಾರೆ. ಆಸ್ಪತ್ರೆ ಬಳಿ ಯುವತಿ ಅಕ್ಕನ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಬಂದ್‌ಗೆ ಮುಂದಾಗಿದ್ದ ಸಾರಿಗೆ ಸಂಘಟನೆಗಳಿಗೆ ಶಾಕ್ – ಎಸ್ಮಾ ಜಾರಿ, 6 ತಿಂಗಳು ಪ್ರತಿಭಟನೆಗೆ ನಿಷೇಧ