ಮಾನಸ ಸರೋವರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 26 ಕನ್ನಡಿಗರು ವಾಪಸ್

Public TV
1 Min Read

ಬೆಂಗಳೂರು: ಮಾನಸ ಸರೋವರಕ್ಕೆ ತೆರಳಿ ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರ ಪೈಕಿ 26 ಮಂದಿಯನ್ನು ರಕ್ಷಿಸುವಲ್ಲಿ ಕರ್ನಾಟಕ ಭವನ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಮೈಸೂರಿನ ತಂಡದಲ್ಲಿದ್ದ ಶ್ರೀಕಾಂತ್ ಶರ್ಮಾ ಜೊತೆಗೆ ಬೆಂಗಳೂರಿನ ಬಸವನಗುಡಿಯ ನಿವಾಸಿಗಳಾದ ಸರಸ್ವತಿ ರೆಡ್ಡಿ, ಕೃಷ್ಣ ವೇಣಿ, ಪದ್ಮಾ, ಶೋಭಾ ದೇವಿ, ಪ್ರಮೀಳಾ ಸೇರಿದಂತೆ 26 ಮಂದಿಯ ತಂಡ ಮೈಸೂರಿಗೆ ಬಂದು ಸೇರಿದೆ. ಚನ್ನಪಟ್ಟಣದ ಮಲ್ಲೇಶ್ ಅವರು ಕೂಡಾ ಮರಳಿದ್ದು, ಕಾಲು ಮುರಿದಿದ್ದರಿಂದ ಚಿಕಿತ್ಸೆ ಪಡಿಯುತ್ತಿದ್ದಾರೆ. ತಾವು ಅನುಭವಿಸಿದ ಕಷ್ಟವನ್ನು ಹಂಚಿಕೊಂಡ ಮಲ್ಲೇಶ್, ಪಬ್ಲಿಕ್ ಟಿವಿಗೆ ಧನ್ಯವಾದ ತಿಳಿಸಿದರು.

ಮತ್ತೊಂದು ತಂಡ ಇವತ್ತು ರಾತ್ರಿ ಬೆಂಗಳೂರಿಗೆ ಆಗಮಿಸಲಿದೆ. ಉಳಿದವರಲ್ಲಿ ಕೆಲವರು ಸಿಮೀಕೋಟ್‍ನಿಂದ ನೇಪಾಳದ ಗಂಜ್‍ಗೆ ಬಂದಿದ್ದು, ಕಠ್ಮಂಡು ಮೂಲಕ ನಾಳೆ ಬೆಂಗಳೂರಿಗೆ ಬರಲಿದ್ದಾರೆ. ರಕ್ಷಣಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಅಧಿಕಾರಿಗಳಾದ ವೆಂಕಟೇಶ್, ಈಶ್ವರ್ ಕಟ್ಟಿಮನಿ ಬಳಿ ಯಾತ್ರಿಗಳು ಕಣ್ಣೀರಿಟ್ಟು, ತಾವು ಅನುಭವಿಸಿದ ನರಕಯಾತನೆಯನ್ನು ಹೇಳಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *