ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ – ಯುವತಿ ಸಾವು

1 Min Read

ಬೆಂಗಳೂರು: ಅತಿ ವೇಗವಾಗಿ ಬುಲೆಟ್ ಬೈಕ್ ಚಲಾಯಿಸಿಕೊಂಡು ಬಂದ ಸವಾರ ಯುವತಿಯನ್ನ ಬಲಿ ಪಡೆದಿದ್ದಾನೆ.

ರಾಜ್‌ಕುಮಾರ್ ರಸ್ತೆಯ ಹೆಚ್‌ಡಿಎಫ್‌ಸಿ ಬ್ಯಾಂಕ್ ಬಳಿ ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಊಟಕ್ಕೆ ತೆರಳುತ್ತಿದ್ದ 27 ವರ್ಷದ ಯುವತಿ ಯೋಗೇಶ್ವರಿ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಪ್ರತಿಷ್ಟಿತ ವಿವಿ ವಿದ್ಯಾರ್ಥಿನಿ ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ಸಾವು!

ಲಗ್ಗೆರೆ ಬಳಿಯ ಕೆಂಪೇಗೌಡ ಲೇಔಟ್ ನಿವಾಸಿಯಾಗಿದ್ದ ಯೋಗೇಶ್ವರಿ, ನಿನ್ನೆ ಮಧ್ಯಾಹ್ನ ತಮ್ಮ ಕೆಲಸದ ಸ್ಥಳದ ಸಮೀಪ ಊಟಕ್ಕೆಂದು ರಸ್ತೆ ದಾಟುತ್ತಿದ್ದರು. ಈ ಸಂದರ್ಭದಲ್ಲಿ ಅತಿ ವೇಗವಾಗಿ ಬಂದ ಬೈಕ್ ಸವಾರ ಯೋಗೇಶ್ವರಿಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ರಭಸಕ್ಕೆ ರಸ್ತೆಗೆ ಬಿದ್ದ ಯೋಗೇಶ್ವರಿ ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸುಗುಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದರು.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ರಾಜಾಜಿನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬೈಕ್ ಸವಾರನ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ತೀರ್ಥಹಳ್ಳಿ | ಲವ್‌ ಪ್ರಪೋಸ್‌ ಒಪ್ಪದ ಯುವತಿಗೆ ಬಿಯರ್‌ ಬಾಟಲಿಯಲ್ಲಿ ಇರಿದ ಪಾಗಲ್‌ ಪ್ರೇಮಿ!

Share This Article