2ನೇ ಆಷಾಢ ಶುಕ್ರವಾರ – ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡಿ ತಾಯಿ

Public TV
1 Min Read

– ತೋತಾಪುರಿ, ಮೆಕ್ಕೆಜೋಳ, ಕಮಲದಿಂದ ಅಲಂಕೃತಗೊಂಡ ದೇಗುಲ

ಮೈಸೂರು: ಇಂದು ಆಷಾಢ ಮಾಸದ ಎರಡನೇ ಶುಕ್ರವಾರದ ಹಿನ್ನೆಲೆ ಮೈಸೂರು ಚಾಮುಂಡೇಶ್ವರಿ ತಾಯಿ ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.

ಆಷಾಢ ಶುಕ್ರವಾರ ಹಿನ್ನೆಲೆ ದೇವಸ್ಥಾನವನ್ನು ತೋತಾಪುರಿ ಮೆಕ್ಕೆಜೋಳ ಹಾಗೂ ಕಮಲದಿಂದ ಅಲಂಕಾರ ಮಾಡಲಾಗಿದೆ. ಜೊತೆಗೆ ಅಪಾರ ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದಾರೆ.ಇದನ್ನೂ ಓದಿ: ಚಿಪ್ಸ್ ಖರೀದಿಸಲು ಅಂಗಡಿಗೆ ತೆರಳಿದ್ದ 7ರ ಬಾಲಕಿ ಮೇಲೆ ಕಾಮುಕನ ಅಟ್ಟಹಾಸ

ಮುಂಜಾನೆಯಿಂದಲೇ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ತಾಯಿ ಚಾಮುಂಡಿಯ ದರ್ಶನ ಪಡೆಯುತ್ತಿದ್ದಾರೆ.

ನಟ ದರ್ಶನ್‌ ಕುಟುಂಬಸಮೇತರಾಗಿ ತಾಯಿಯ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ: ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯನ್ನರು ಇಸ್ರೇಲ್‌ ದಾಳಿಗೆ ಬಲಿ; 94 ಮಂದಿ ಸಾವು

Share This Article