ಸಾಂಬಾರ್ ಪಾತ್ರೆಗೆ ಬಿದ್ದು 2ನೇ ಕ್ಲಾಸ್ ವಿದ್ಯಾರ್ಥಿನಿ ದಾರುಣ ಸಾವು

Public TV
1 Min Read

ಕಲಬುರಗಿ: ಬಿಸಿಯೂಟದ ಸಾಂಬಾರ್ ಪಾತ್ರೆಗೆ (Sambar Pot) ಬಿದ್ದು, ಗಂಭೀರವಾದ ಸುಟ್ಟ ಗಾಯಗಳಾಗಿದ್ದ 2ನೇ ತರಗತಿಯ ವಿದ್ಯಾರ್ಥಿನಿ (Student) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

ಮಹಾಂತಮ್ಮ (6) ಸಾಂಬಾರ್ ಪಾತ್ರೆಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ 2ನೇ ತರಗತಿಯ ವಿದ್ಯಾರ್ಥಿನಿ. ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿ (School) ನವೆಂಬರ್ 16ರಂದು ಈ ಘೋರ ದುರಂತ ನಡೆದಿತ್ತು. ವಿದ್ಯಾರ್ಥಿನಿ ಸಾಂಬಾರ್ ಪಾತ್ರೆಗೆ ಬಿದ್ದ ಹಿನ್ನೆಲೆ ಆಕೆಗೆ ಗಂಭೀರವಾದ ಸುಟ್ಟ ಗಾಯಗಳಾಗಿತ್ತು.

ಆಕೆಯನ್ನು ಮೊದಲಿಗೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆಯಷ್ಟೇ ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಶಮಿ ಕೈಯಲ್ಲಿ ಬೆಂಕಿ ಚೆಂಡು- ಕಾಂಗರೂಗಳ ನಿದ್ದೆಗೆಡಿಸಿರೋ ಸ್ವಿಂಗ್ ಮಾಸ್ಟರ್

ಈ ದುರ್ಘಟನೆಯ ಹಿನ್ನೆಲೆ ನಿರ್ಲಕ್ಷ್ಯದಡಿ ಶಾಲೆಯ ಮುಖ್ಯ ಶಿಕ್ಷಕ ಸೇರಿದಂತೆ ಹಲವರನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ

Share This Article