– ಇದೇ ಮೊದಲ ಬಾರಿಗೆ ಫಲಿತಾಂಶ ಪ್ರಕಟವಾದ ದಿನವೇ ಡಿಜಿ ಲಾಕರ್‌ನಲ್ಲಿ ಅಂಕಪಟ್ಟಿ ಲಭ್ಯ
ಬೆಂಗಳೂರು: ನಾಳೆ (ಏ.9) ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯವಾಗಲಿದೆ.
ಈ ಮೊದಲು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟವಾಗುತ್ತಿತ್ತು. ಆದರೆ ಈ ಬಾರಿ ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಬಳಿಕ ಸುದ್ದಿಗೋಷ್ಠಿ ನಡೆಯಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6:15ಕ್ಕೆ ಫಲಿತಾಂಶದ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇದನ್ನೂ ಓದಿ: ಬಳ್ಳಾರಿ ರೈಲ್ವೇ ನಿಲ್ದಾಣದಲ್ಲಿ 20.24 ಲಕ್ಷ ಮೌಲ್ಯದ 40.49 ಕೆಜಿ ಗಾಂಜಾ ಜಪ್ತಿ – ಆರೋಪಿಗಳು ಎಸ್ಕೇಪ್
ಇಲಾಖೆ ವೆಬ್‌ಸೈಟ್ https://karresults.nic.in ಫಲಿತಾಂಶ ಲಭ್ಯವಾಗಲಿದೆ ಜೊತೆಗೆ Karnatakaone ಮೊಬೈಲ್ ಆಪ್ ಮೂಲಕ ಫಲಿತಾಂಶ ಪಡೆಯಬಹುದು ಹಾಗೂ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ, ವಾಟ್ಸಪ್ , SMSಮೂಲಕವೂ ಫಲಿತಾಂಶ ರವಾನೆ ಆಗಲಿದೆ.
ಇನ್ನೂ ಈ ವರ್ಷ ಮೊದಲ ಬಾರಿಗೆ ಡಿಜಿ ಲಾಕರ್‌ನಲ್ಲಿ ವಿದ್ಯಾರ್ಥಿಗಳ ಅಂಕಪಟ್ಟಿ ಲಭ್ಯವಾಗಲಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಅಂಕಪಟ್ಟಿ ಡಿಜಿ ಲಾಕರ್‌ನಲ್ಲಿ ಲಭ್ಯವಿರಲಿದೆ. https://www.digilocker.gov.in/ ಬಳಸಿ ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ನಾಳೆ 3 ಗಂಟೆ ನಂತರ ಕಾಲೇಜುಗಳಿಗೆ ಫಲಿತಾಂಶ ಪಟ್ಟಿ ರವಾನೆ ಆಗಲಿದೆ. ಫೆಬ್ರವರಿ 28ರಿಂದ ಮಾರ್ಚ್ 17ವರೆಗೆ ಪರೀಕ್ಷೆ ನಡೆದಿತ್ತು. ಸುಮಾರು 7.10 ಲಕ್ಷ ವಿದ್ಯಾರ್ಥಿಗಳು 1217 ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.ಇದನ್ನೂ ಓದಿ: ಪ್ರಮುಖ ವಲಯಗಳಿಗೆ ಹೆಚ್ಚಿನ ಎಲ್‌ಪಿಜಿ ಹಂಚಿಕೆ ಮಾಡಿ: ರಾಜ್ಯಗಳಿಗೆ ಕೇಂದ್ರ ಸೂಚನೆ

