3ನೇ ಬಾರಿಯೂ ಕೈತಪ್ಪಿದ ಸಚಿವ ಸ್ಥಾನ – ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದ ಕುಮಾರಸ್ವಾಮಿ

Public TV
2 Min Read

ಚಿಕ್ಕಮಗಳೂರು: ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರಗೊಂಡು ಬಿಜೆಪಿ ಸರ್ಕಾರದ ಮೊದಲ ಎರಡು ಪ್ರಮಾಣ ವಚನ ಕಾರ್ಯಕ್ರಮಕ್ಕೂ ಗೈರಾಗಿದ್ದ ಜಿಲ್ಲೆಯ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಮೂರನೇ ಬಾರಿಯೂ ಸಚಿವ ಸ್ಥಾನ ಕೈತಪ್ಪಿ ಭಾರೀ ನಿರಾಸೆ ಮೂಡಿದೆ. ನಿನ್ನೆ ಸಂಜೆವರೆಗೂ ನೂತನ ಸಚಿವರ ಹೆಸರಲ್ಲಿ ಎಂ.ಪಿ.ಕುಮಾರಸ್ವಾಮಿ ಹೆಸರಿತ್ತು. ಆದರೆ ಕೊನೆ ಘಳಿಗೆಯಲ್ಲಿ ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ.

1999-2004 ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಮೂರು ಬಾರಿ (2004, 2008 ಹಾಗೂ 2018) ಶಾಸಕರಾಗಿ ಆಯ್ಕೆಯಾಗಿರೋ ಎಂ.ಪಿ.ಕುಮಾರಸ್ವಾಮಿ ಈ ಬಾರಿ ಸಚಿವ ಸ್ಥಾನಕ್ಕಾಗಿ ದೆಹಲಿ, ಬೆಂಗಳೂರಿನಲ್ಲಿ ಭಾರೀ ಲಾಬಿ ನಡೆಸಿದ್ದರು. ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂದೇ ಹೇಳಲಾಗುತ್ತಿತ್ತು. ಸಿಎಂ ಬೊಮ್ಮಾಯಿ ತಂದ ಅಂತಿಮ ಪಟ್ಟಿಯಲ್ಲಿ ಕುಮಾರಸ್ವಾಮಿ ಹೆಸರು ಇಲ್ಲವಾಗಿದೆ. ಇದರಿಂದ ಸಚಿವ ಸ್ಥಾನದ ಆಸೆ ಹಾಗೂ ಆಕಾಂಕ್ಷೆಯಲ್ಲಿದ್ದ ಎಂ.ಪಿ.ಕುಮಾರಸ್ವಾಮಿ ಈ ಬಾರಿಯೂ ನಿರಾಸೆ ಮೂಡಿದೆ. ಕಳೆದೊಂದು ವಾರದಿಂದ ಬೆಂಗಳೂರಿನಲ್ಲೇ ಬೀಡು ಬಿಟ್ಟಿದ್ದ ಕುಮಾರಸ್ವಾಮಿ ಸಚಿವ ಸ್ಥಾನ ಸಿಗದ ಕಾರಣ ಕ್ಷೇತ್ರದ ಮತದಾರರು ಹಾಗೂ ಅಭಿಮಾನಿಗಳು, ಕಾರ್ಯಕರ್ತರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ.

“ಸಿಎಂ ಬೊಮ್ಮಾಯಿ ಅವರು ನನ್ನನ್ನ ಕರೆಸಿ ಈ ಬಾರಿ ಚಿಕ್ಕಮಗಳೂರು ಜಿಲ್ಲೆಗೆ ಯಾವುದೇ ಸಚಿವ ಸ್ಥಾನ ಇಲ್ಲ. ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಿಲಾಗಿದೆ, ಮುಂದಿನ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ವೇಳೆ ನಿಮ್ಮನ್ನ ಪರಿಗಣಿಸುವುದಾಗಿ ಭರವಸೆ ನೀಡಿದ್ದಾರೆ. ನನಗೆ ಪ್ರಾರ್ಥನೆ ಸಲ್ಲಿಸಿದ ಎಲ್ಲರಿಗೂ ನಾನು ಋಣಿ, ಮುಂದಿನ ದಿನಗಳಲ್ಲಿ ಸುಭದ್ರ ಸರ್ಕಾರಕ್ಕೆ ಪ್ರಾಮಾಣಿಕ ಪ್ರಯತ್ನದೊಂದಿಗೆ ಕ್ಷೇತ್ರದ ಅಭಿವೃದ್ಧಿ ಜೊತೆ ಪಕ್ಷವನ್ನ ಮತ್ತಷ್ಟು ಗಟ್ಟಿಗೊಳಿಸೋಣ” ಎಂದು ಭಾವನಾತ್ಮಕ ಪತ್ರ ಬರೆದಿದ್ದಾರೆ.

ಬಲಗೈ ಸಮುದಾಯಕ್ಕೆ ಬೇಡಿಕೆ: ಬಿಜೆಪಿ ಸರ್ಕಾರದ ಮೊದಲ ಎರಡು ಪ್ರಮಾಣ ವಚನ ಕಾರ್ಯಕ್ರಮಕ್ಕೂ ಕುಮಾರಸ್ವಾಮಿ ಹೋಗಿರಲಿಲ್ಲ. ದಲಿತ ಸಮುದಾಯದ ಬಲಗೈ ಕೋಟಾದಿಂದ ಯಾರಿಗೂ ಸಚಿವ ಸ್ಥಾನ ನೀಡಿಲ್ಲ. ನನಗೆ ಕೊಡದಿದ್ದರೂ ನಮ್ಮ ಸಮುದಾಯಕ್ಕೆ ನೀಡಿ ಎಂದು ಆಗ್ರಹಿಸಿದ್ದರು. ಈ ಬಾರಿ ಕುಮಾರಸ್ವಾಮಿಯೇ ಸಚಿವ ಸ್ಥಾನಕ್ಕಾಗಿ ಭಾರೀ ಲಾಬಿ ನಡೆಸಿದ್ದರು. ಈ ಬಾರಿಯೂ ಸಚಿವ ಸ್ಥಾನದಿಂದ ವಂಚಿತರಾಗಿದ್ದರಿಂದ ಬೇಸರಗೊಂಡಿದ್ದಾರೆ. ಇದನ್ನೂ ಓದಿ:ಮೋಸ, ವಂಚನೆ, ವಸೂಲಿಯಿಂದ ಸಚಿವ ಸ್ಥಾನ ತಪ್ಪಿತು: ಸಿಎಂ ವಿರುದ್ಧವೇ ಗುಡುಗಿದ ಶಾಸಕ ಓಲೇಕಾರ್

ಬೊಮ್ಮಾಯಿ ಸಂಪುಟದ ಫೈನಲ್ ಪಟ್ಟಿ
ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ, ಆರ್.ಅಶೋಕ್- ಪದ್ಮನಾಭ ನಗರ, ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ, ಉಮೇಶ್ ಕತ್ತಿ- ಹುಕ್ಕೇರಿ, ಎಸ್.ಟಿ.ಸೋಮಶೇಖರ್- ಯಶವಂತಪುರ, ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ, ಬೈರತಿ ಬಸವರಾಜ – ಕೆ ಆರ್ ಪುರಂ, ಮುರುಗೇಶ್ ನಿರಾಣಿ – ಬೀಳಗಿ, ಶಿವರಾಂ ಹೆಬ್ಬಾರ್- ಯಲ್ಲಾಪುರ, ಶಶಿಕಲಾ ಜೊಲ್ಲೆ- ನಿಪ್ಪಾಣಿ, ಕೆಸಿ ನಾರಾಯಣಗೌಡ – ಕೆಆರ್ ಪೇಟೆ, ಸುನೀಲ್ ಕುಮಾರ್ – ಕಾರ್ಕಳ, ಅರಗ ಜ್ಞಾನೇಂದ್ರ – ತೀರ್ಥಹಳ್ಳಿ, ಗೋವಿಂದ ಕಾರಜೋಳ-ಮುಧೋಳ, ಮುನಿರತ್ನ- ಆರ್ ಆರ್ ನಗರ, ಎಂ.ಟಿ.ಬಿ ನಾಗರಾಜ್ – ಎಂಎಲ್‍ಸಿ, ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್, ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ, ಹಾಲಪ್ಪ ಆಚಾರ್ – ಯಲ್ಬುರ್ಗ, ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ, ಕೋಟಾ ಶ್ರೀನಿವಾಸ ಪೂಜಾರಿ – ಎಂಎಲ್‍ಸಿ, ಪ್ರಭು ಚೌವ್ಹಾಣ್ – ಔರಾದ್, ವಿ ಸೋಮಣ್ಣ – ಗೋವಿಂದ್ ರಾಜನಗರ, ಎಸ್ ಅಂಗಾರ-ಸುಳ್ಯ, ಆನಂದ್ ಸಿಂಗ್ – ಹೊಸಪೇಟೆ, ಸಿ.ಸಿ.ಪಾಟೀಲ್ – ನರಗುಂದ, ಬಿ.ಸಿ.ನಾಗೇಶ್ – ತಿಪಟೂರು, ಬಿ.ಶ್ರೀ ರಾಮುಲು- ಮೊಳಕಾಲ್ಮೂರು ಇದನ್ನೂ ಓದಿ: ಇನ್‍ಸೈಡ್ ಸ್ಟೋರಿ – ಕೊನೆಯ ಹಂತದಲ್ಲಿ ವಿಜಯೇಂದ್ರಗೆ ಸಚಿವ ಸ್ಥಾನ ತಪ್ಪಿದ್ದೇಗೆ?

Share This Article
Leave a Comment

Leave a Reply

Your email address will not be published. Required fields are marked *