ಕಲಬುರಗಿ | ಭೀಮಾ ನದಿಗೆ 3.40 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

Public TV
1 Min Read

– ನದಿ ನೀರು ರೈತರ ಜಮೀನಿಗೆ ನುಗ್ಗಿ, ಅಪಾರ ಬೆಳೆ ಹಾನಿ

ಕಲಬುರಗಿ: ಜಿಲ್ಲೆಯ ಸೊನ್ನ ಬ್ಯಾರೇಜ್‌ನಿಂದ ಭೀಮಾ ನದಿಗೆ 3.40 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ ಪರಿಣಾಮ ನದಿ ನೀರು ಹಾಗರಗುಂಡಗಿ ಗ್ರಾಮದ ರೈತರ ಜಮೀನಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಮಹಾರಾಷ್ಟ್ರದ ಉಜ್ಜನಿ ಜಲಾಶಯದಿಂದ 50,000 ಕ್ಯೂಸೆಕ್, ಸಿನಾ ಜಲಾಶಯದಿಂದ 2.70 ಲಕ್ಷ ಕ್ಯೂಸೆಕ್, ಭೋರಿ ಹಳ್ಳದಿಂದ 3.20 ಲಕ್ಷ ಕ್ಯೂಸೆಕ್ ನೀರು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ.

ಅಫಜಲಪುರದ ಸೊನ್ನ ಬ್ಯಾರೇಜ್‌ನಿಂದ 3.20 ಲಕ್ಷ ಕ್ಯೂಸೆಕ್ ನೀರು ಭೀಮಾ ನದಿಗೆ ನೀರು ಬಿಡಲಾಗಿದೆ. ನದಿ ನೀರು ಹಾಗರಗುಂಡಗಿ ಗ್ರಾಮದ ರೈತರ ಜಮೀನುಗಳಿಗೆ ನುಗ್ಗಿದೆ. ಹತ್ತಿ, ತೊಗರಿ ಸೇರಿದಂತೆ ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು, ರೈತರು ಕಂಗಲಾಗಿದ್ದಾರೆ.

ಇದೀಗ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ವಿಜಯಪುರದ ನದಿ ಪಾತ್ರದ ಜನರಲ್ಲಿ ಪ್ರವಾಹ ಆತಂಕ ಸೃಷ್ಟಿಯಾಗಿದೆ. ಜನರು ನದಿಯ ದಡಕ್ಕೆ ಹೋಗದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.

Share This Article