ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ದುರ್ಗಾಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ (Medical Student) ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಸ್ಥಳೀಯರಾಗಿದ್ದು, ಪೊಲೀಸರು ಅವರ ಗುರುತನ್ನು ಇನ್ನೂ ಬಹಿರಂಗಪಡಿಸಿಲ್ಲ.
ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ (Odisha) ಜಲೇಶ್ವರ ಮೂಲದ ವಿದ್ಯಾರ್ಥಿನಿಯ ಮೇಲೆ ಶುಕ್ರವಾರ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಆಕೆ ತನ್ನ ಸ್ನೇಹಿತನೊಂದಿಗೆ ತೆರಳಿದ್ದಾಗ ಕೆಲವರು ಅವರನ್ನು ತಡೆದು ಅವರನ್ನು 1 ಕಿ.ಮೀ ದೂರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಬಳಿಕ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ಇದನ್ನೂ ಓದಿ: ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್; ಬಂಗಾಳದಲ್ಲಿ ಮತ್ತೊಂದು ಕ್ರೂರ ಘಟನೆ
ಆಕೆಯ ಸ್ನೇಹಿತ ಕೂಡ ಈ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಯುವತಿಗೆ ಸುಳ್ಳು ಹೇಳಿ ಆಕೆಯನ್ನು ದಾರಿ ತಪ್ಪಿಸಿ ನಿರ್ಜನ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಅಲ್ಲದೇ ಆಕೆಯ ಫೋನ್ ಕಸಿದುಕೊಂಡು 5,000 ರೂ. ಹಣ ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಯುವತಿಗೆ ದುರ್ಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವಳು ಗುಣಮುಖಳಾಗುತ್ತಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ಮೂವರು ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಮನೆಗೆ ಊಟಕ್ಕೆ ಅಂತ ಕರೆಸಿ ಬಿಸಿಎ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಪ್ರೊಫೆಸರ್ ಅರೆಸ್ಟ್