ಶಿವರಾತ್ರಿ ಹಬ್ಬ ಸೇರಿ 3 ದಿನ ರಜೆ- ಊರಿಗೆ ಹೊರಟ ಜನ, ಭಾರೀ ಟ್ರಾಫಿಕ್‌

By
1 Min Read

ಬೆಂಗಳೂರು: ಶಿವರಾತ್ರಿ ಹಬ್ಬ (Maha Shivratri) ಸೇರಿ ಮೂರು ದಿನಗಳ ಕಾಲ ರಜೆಯ ಹಿನ್ನೆಲೆಯಲ್ಲಿ ಜನ ಊರಿಗೆ ಹೊರಟಿದ್ದಾರೆ. ಈಹಿನ್ನೆಲೆಯಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಭಾರೀ ಟ್ರಾಫಿಕ್‌ ಜಾಮ್‌ ಉಂಟಾಗಿದೆ.

ಶಿವರಾತ್ರಿ ಹಬ್ಬ ಹಾಗೂ ಎರಡನೇ ಶನಿವಾರ ಹಾಗೂ ಭಾನುವಾರ ರಜೆ ಹಿನ್ನೆಲೆಯಲ್ಲಿ ಜನರು ಬೆಂಗಳೂರಿನಿಂದ ತಮ್ಮ ತಮ್ಮ ಊರಿಗೆ ಹೊರಟಿದ್ದಾರೆ. ಹೀಗಾಗಿ ಮೆಜೆಸ್ಟಿಕ್ ಸುತ್ತ ಮುತ್ತ, ಮೈಸೂರು ಬ್ಯಾಂಕ್, ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ಉಪಾರಪೇಟೆಯಲ್ಲೂ ಟ್ರಾಫಿಕ್ ಜಾಮ್ ಉಂಟಾಗಿದ್ದು, ಜನ ಪರದಾಡುತ್ತಿದ್ದಾರೆ.

ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಆರ್‌ಟಿಸಿ ಅಧಿಕಾರಿಗಳು ಈಗಾಗಲೇ ಹೆಚ್ಚುವರಿ ಬಸ್ ಗಳನ್ನು ಬಿಟ್ಟಿದ್ದಾರೆ. ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ರಾಜ್ಯ ಮತ್ತು ಹೊರರಾಜ್ಯದ ನಾನಾ ಪ್ರದೇಶಗಳಿಗೆ ಇಂದಿನಿಂದ 10 ರವರೆಗೆ ಹೆಚ್ಚುವರಿಯಾಗಿ 1,500 ಬಸ್‌ಗಳನ್ನು ಕಾರ್ಯಾಚರಣೆಗೊಳಿಸಿದೆ. ಹಾಗೆಯೇ ಬೆಂಗಳೂರಿಗೆ ಬರುವವರಿಗಾಗಿ ಮಾರ್ಚ್‌ 10 ಮತ್ತು 11 ರಂದು ವಿಶೇಷ ಬಸ್‌ಗಳನ್ನು ಬಿಡಲಾಗುತ್ತಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದರೆ 5% ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹೋಗುವ ಮತ್ತು ಬರುವ ಪ್ರಯಾಣ ಟಿಕೆಟ್‌ ಒಟ್ಟಿಗೆ ಕಾಯ್ದಿರಿಸಿದರೆ, 10% ರಷ್ಟು ರಿಯಾಯಿತಿ ಸಿಗಲಿದೆ ಎಂದು ಕೆಎಸ್‌ಆರ್‌ಟಿಸಿಯು ಪ್ರಕಟಣೆಯಲ್ಲಿ ತಿಳಿಸಿತ್ತು.

Share This Article