14 ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ- ಮೂವರು ಸಾವು

Public TV
1 Min Read

ಮುಂಬೈ: ಮುಂಬೈನ (Mumbai) ಲೋಖಂಡವಾಲಾ ಕಾಂಪ್ಲೆಕ್ಸ್‌ನಲ್ಲಿ (Lokhandwala Complex)  14 ಅಂತಸ್ತಿನ ವಸತಿ ಕಟ್ಟಡದಲ್ಲಿ ಬುಧವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್‌ನ 4ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್ ಕಟ್ಟಡದ 10ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಮೂವರನ್ನು ಕೂಪರ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿರುವುದಾಗಿ ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಮಂಗನ ಕಾಯಿಲೆಗೆ ಲಸಿಕೆ: ಐಸಿಎಂಆರ್ ಮಹಾನಿರ್ದೇಶಕರ ಜೊತೆ ದಿನೇಶ್ ಗುಂಡೂರಾವ್ ಚರ್ಚೆ

ಮೃತರನ್ನು ಚಂದ್ರಪ್ರಕಾಶ್ ಸೋನಿ (74), ಕಾಂತಾ ಸೋನಿ (74) ಮತ್ತು ಪೆಲುಬೇಟ (42) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಮಾಜಿ ಸಚಿವ ನಾಗೇಂದ್ರ ಪರಪ್ಪನ ಅಗ್ರಹಾರ ಜೈಲಿಂದ ರಿಲೀಸ್‌

ಬೆಳಗ್ಗೆ 9 ಗಂಟೆ ಸುಮಾರಿಗೆ ಬೆಂಕಿ ನಂದಿಸಲಾಯಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ. ಇದನ್ನೂ ಓದಿ: ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ – ಯೂಟ್ಯೂಬ್ ನೋಡಿ ಶೂಟಿಂಗ್ ಕಲಿತಿದ್ದ ಹಂತಕರು

ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ಭಾರತದ ಪ್ರಭಾವ ಕುಗ್ಗಿಸಲು ಖಲಿಸ್ತಾನಿಗಳಿಗೆ ಪಾಕ್‌ ಬೆಂಬಲ – ಕೆನಡಾ ಅಧಿಕಾರಿ ಹೇಳಿಕೆ ವಿಡಿಯೋ ವೈರಲ್‌

Share This Article