ವಕ್ಫ್‌ ಕಾಯ್ದೆಗೆ ವಿರೋಧ, ಬಂಗಾಳ ಧಗಧಗ – 150ಕ್ಕೂ ಹೆಚ್ಚು ಮಂದಿ ಬಂಧನ

Public TV
1 Min Read

ಕೋಲ್ಕತ್ತಾ: ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ಧ ಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಘರ್ಷಣೆ ಮುಂದುವರಿದಿದೆ. ಈವರೆಗೆ ಒಟ್ಟು ಮೂವರು ಸಾವನ್ನಪ್ಪಿದ್ದು, ಇಂದು ಬೆಳಗ್ಗೆ 12 ಮಂದಿ ಸೇರಿ 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಶುಕ್ರವಾರದ ಪ್ರಾರ್ಥನೆಯ ನಂತರ ಭುಗಿಲೆದ್ದ ಹಿಂಸಾಚಾರದಿಂದಾಗಿ ಮುರ್ಷಿದಾಬಾದ್‌ ಜಿಲ್ಲೆಯ ಹಲವು ಭಾಗಗಳಿಗೆ ವ್ಯಾಪಿಸಿದ್ದು, ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿವೆ. ಕಳೆದ ರಾತ್ರಿ ಪೊಲೀಸರು, ಅರೆಸೇನಾ ಪಡೆಗಳು ಸಂಪೂರ್ಣ ಗಸ್ತು ತಿರುಗಿದ್ದು, ಸುತಿ, ಧುಲಿಯನ್, ಸಂಸರ್‌ಗಂಜ್ ಮತ್ತು ಜಂಗಿಪುರ ಪ್ರದೇಶಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿವೆ. ಆದಾಗ್ಯೂ ಹಿಂಸಾಚಾರ ಪೀಡಿತ ಮುರ್ಷಿದಾಬಾದ್‌ನಲ್ಲಿ ಸ್ಥಳೀಯವಾಗಿ ಲಭ್ಯವಿರುವ ಸುಮಾರು 300 ಬಿಎಸ್‌ಎಫ್ ಸಿಬ್ಬಂದಿಯಲ್ಲದೆ, ಪಶ್ಚಿಮ ಬಂಗಾಳ ಸರ್ಕಾರದ ಕೋರಿಕೆಯ ಮೇರೆಗೆ ಇನ್ನೂ 5 ಕಂಪನಿಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಧರ್ಮದ ಹೆಸರಿನಲ್ಲಿ ಅನ್ಯಾಯದ ವರ್ತನೆಯಲ್ಲಿ ತೊಡಗಬೇಡಿ: ಪ್ರತಿಭಟನಾಕಾರರಿಗೆ ಮಮತಾ ಬ್ಯಾನರ್ಜಿ ಮನವಿ

ಮುರ್ಷಿದಾಬಾದ್, ಮಾಲ್ಡಾ, ದಕ್ಷಿಣ 24 ಪರಗಣ ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಯಿತು, ಭದ್ರತಾ ಪಡೆಗಳ ಮೇಲೆ ಕಲ್ಲು ತೂರಲಾಯಿತು ಮತ್ತು ರಸ್ತೆಗಳನ್ನು ನಿರ್ಬಂಧಿಸಲಾಯಿತು. ಇದನ್ನೂ ಓದಿ: ಬಂಗಾಳದಲ್ಲಿ ವಕ್ಫ್‌ ಕಾಯ್ದೆ ವಿರೋಧಿಸಿ ಪ್ರತಿಭಟನೆ – ಘರ್ಷಣೆಯಲ್ಲಿ ಮೂವರು ಸಾವು

ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮಾತನಾಡಿ, ರಾಜ್ಯದಲ್ಲಿ ಹಿಂದೂಗಳು ಸುರಕ್ಷಿತವಾಗಿಲ್ಲ ಎಂದು ಆರೋಪಿಸಿದ್ದು, ಮತ್ತೊಂದೆಡೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶಾಂತಿಗಾಗಿ ಮನವಿ ಮಾಡಿದರು ಮತ್ತು ಕೆಲವು ರಾಜಕೀಯ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಧರ್ಮವನ್ನು ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಭಾರತದ ಗಡಿಯಲ್ಲಿ ಗುಂಡಿನ ಚಕಮಕಿ – ಪಾಕ್ ನುಸುಳುಕೋರರನ್ನು ಹಿಮ್ಮೆಟ್ಟಿಸುವ ಪ್ರಯತ್ನದಲ್ಲಿ ಓರ್ವ ಯೋಧ ಹುತಾತ್ಮ

Share This Article