ಅಪಘಾತವೆಸಗಿ ತಪ್ಪಿಸಿಕೊಳ್ಳುವ ಯತ್ನದಲ್ಲಿ ಕಾರುಗಳಿಗೆ ಡಿಕ್ಕಿ – ಮೂವರು ಸಾವು

Public TV
1 Min Read

ಮುಂಬೈ: ವೇಗವಾಗಿ ಬಂದ ಕಾರೊಂದು (Car) ಹಲವಾರು ವಾಹನಗಳಿಗೆ ಡಿಕ್ಕಿ (Accident) ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮುಂಬೈನ (Mumbai) ಬಾಂದ್ರಾ ವರ್ಲಿ ಸೀ ಲಿಂಕ್‍ನಲ್ಲಿರುವ ಟೋಲ್ ಪ್ಲಾಜಾದಲ್ಲಿ ನಡೆದಿದೆ.

ಬಾಂದ್ರಾ ಕಡೆಗೆ ಬರುತ್ತಿದ್ದ ಇನ್ನೋವಾ ಕಾರು ಗುರುವಾರ ರಾತ್ರಿ 10.15ರ ಸುಮಾರಿಗೆ ಟೋಲ್ ಬಳಿ ಕಾರೊಂದಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಕಾರು ಚಾಲಕ ತಪ್ಪಿಸಿಕೊಳ್ಳಲು ಯತ್ನಿಸಿ ವೇಗವಾಗಿ ಕಾರು ಚಲಾಯಿಸಿದ್ದಾನೆ. ಈ ವೇಳೆ ಟೋಲ್ ಸರದಿಯಲ್ಲಿದ್ದ ಹಲವಾರು ಕಾರುಗಳಿಗೆ ಇನ್ನೋವಾ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಮಹಿಳೆಯರು ಮತ್ತು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಲ್ಲದೇ ಆರು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: KEA ಅಕ್ರಮ; ಕಿಂಗ್‌ಪಿನ್ ಆರ್.ಡಿ.ಪಾಟೀಲ್‌ಗೆ ಫ್ಲ್ಯಾಟ್‌ ಬಾಡಿಗೆಗೆ ನೀಡಿದ್ದ ಮಾಲೀಕ ಸೇರಿ ಮೂವರು ಅರೆಸ್ಟ್

ಗಾಯಗೊಂಡ ಆರು ಮಂದಿಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಇನ್ನೋವಾ ಕಾರಿನ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆತನಿಗೆ ಚಿಕಿತ್ಸೆ ನೀಡಲಾಗಿದೆ. ಆತನನ್ನು ಬಂಧಿಸಲಾಗಿದ್ದು, ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರೀತಿಸುವ ನಾಟಕವಾಡಿ ಅಪ್ರಾಪ್ತೆಯ ಗರ್ಭಿಣಿ ಮಾಡಿದ ಆರೋಪಿ ಅರೆಸ್ಟ್

Share This Article