ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ಆಪೆ ಆಟೋ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಆಟೋದಲ್ಲಿದ್ದ ಭಾಸ್ಕರ್(35), ಪಾರ್ವತಮ್ಮ(38), ಗೌರಮ್ಮ(33) ಮೃತಪಟ್ಟ ದುರ್ದೈವಿಗಳು. ಜಿಲ್ಲೆಯ ಮುಳಬಾಗಿಲು ತಾಲೂಕಿನ ಗಾಜಲಬಾವಿ ಗ್ರಾಮದ ಬಳಿ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಬಂಗಾರಪೇಟೆ ತಾಲೂಕು ಸುಣ್ಣಕುಪ್ಪಂ ಗ್ರಾಮದಿಂದ ಮುಳಬಾಗಿಲು ಬಳಿಯ ಖಾದ್ರಿಪುರ ಶನಿಮಹಾತ್ಮ ದೇವಾಲಯಕ್ಕೆ ಒಂದೇ ಆಟೋದಲ್ಲಿ 7 ಮಂದಿ ಹೋಗಿದ್ದರು. ದೇವರ ದರ್ಶನ ಮಾಡಿ ಗ್ರಾಮಕ್ಕೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಆಟೋ ಚಾಲನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.