ಚೆನ್ನೈ: ಶಿಕ್ಷಕನ ಮೇಲೆಯೇ ವಿದ್ಯಾರ್ಥಿಯೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ತಿರುಪುತ್ತೂರ್ ಜಿಲ್ಲೆಯಲ್ಲಿ ನಡೆದಿದೆ.
ಶಿಕ್ಷಕರ ಮೇಲೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಮದನೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: ಉತ್ತರಪ್ರದೇಶದಲ್ಲಿ ಕೊರೊನಾ ಸೋಂಕು ಶೇ.50ಕ್ಕೆ ಏರಿಕೆ – ಕಠಿಣ ಕ್ರಮಕ್ಕೂ ಬಗ್ಗದ ಜನ
ತರಗತಿಯಲ್ಲಿ ವಿದ್ಯಾರ್ಥಿ ನಿದ್ರಿಸುತ್ತಿರುವುದನ್ನು ಗಮನಿಸಿದ ಶಿಕ್ಷಕ ಆತನನ್ನು ಎಬ್ಬಿಸಿ ಪ್ರಾಕ್ಟಿಕಲ್ ವರ್ಕ್ ಸಲ್ಲಿಸಿದ್ದೀಯಾ ಎಂದು ಕೇಳಿದ್ದಾರೆ. ಈ ವೇಳೆ ವಿದ್ಯಾರ್ಥಿ, ಶಿಕ್ಷಕರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೂ ಯತ್ನಿಸಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯು ಕಂದಾಯ ವಿಭಾಗೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಒಬ್ಬ ವಿದ್ಯಾರ್ಥಿ ಮಾತ್ರ ಶಿಕ್ಷಕರ ವಿರುದ್ಧ ಹಲ್ಲೆಗೆ ಯತ್ನಿಸಿದ್ದಾನೆ. ಆದರೆ ಉಳಿದ ಇಬ್ಬರು ವಿದ್ಯಾರ್ಥಿಗಳು ಆತನ ಕುಕೃತ್ಯಕ್ಕೆ ಸಹಕಾರ ನೀಡಿದ್ದಕ್ಕೆ ಮೂವರಿಗೂ ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: ಬಿಹು ಹಬ್ಬದಲ್ಲಿ ಕುಣಿದು ಕುಪ್ಪಳಿಸಿದ ಅರುಣಾಚಲ ಪ್ರದೇಶದ ಸಿಎಂ
ಬೋರ್ಡ್ ಪರೀಕ್ಷೆ ಇರುವುದರಿಂದ ನಾವು ಯಾವುದೇ ವಿದ್ಯಾರ್ಥಿಯನ್ನು ಅಮಾನತುಗೊಳಿಸಿಲ್ಲ. ವಿದ್ಯಾರ್ಥಿಯ ಪೋಷಕರಿಗೆ ಪಾಲಕ-ಶಿಕ್ಷಕರ ಸಂಘದ ಮೂಲಕ ನೋಟಿಸ್ ಜಾರಿ ಮಾಡಿದ್ದೇವೆ. ವಿದ್ಯಾರ್ಥಿಯು ತನ್ನ ವರ್ತನೆ ಕುರಿತು ಶಿಕ್ಷಕರ ಬಳಿ ಬೇಷರತ್ತಾದ ಲಿಖಿತ ಕ್ಷಮೆಯಾಚಿಸಿದರೆ, ಶಾಲೆಗೆ ಹಾಜರಾಗಲು ಅನುಮತಿ ನೀಡಬಹುದು. ಒಂದು ವೇಳೆ ಕ್ಷಮೆಯಾಚಿಸದಿದ್ದರೆ, ಶಾಲಾ ಆಡಳಿತ ಮಂಡಳಿಯು ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ವಿಭಾಗೀಯ ಅಧಿಕಾರಿ ತಿಳಿಸಿದ್ದಾರೆ.