ಜೆಜೆಎಂ ಪೈಪ್‌ಗೆ ಚರಂಡಿ ನೀರು ಸೇರ್ಪಡೆ; ನೀರು ಸೇವಿಸಿದ 30ಕ್ಕೂ ಹೆಚ್ಚು ಜನರು ಅಸ್ವಸ್ಥ

Public TV
2 Min Read

ಚಿತ್ರದುರ್ಗ: ಜೆಜೆಎಂ ಪೈಪ್‌ಲೈನ್‌ನಲ್ಲಿ ಮಿಶ್ರಿತವಾದ ಕಲುಷಿತ ಚರಂಡಿ ನೀರು ಸೇವಿಸಿ 30ಕ್ಕೂ ಅಧಿಕ ಜನರು ಅಸ್ವಸ್ಥರಾಗಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ನಾಗಸಮುದ್ರ ಗ್ರಾಮದಲ್ಲಿ ನಡೆದಿದೆ.

ನಾಗಸಮುದ್ರ ಗ್ರಾಮದಲ್ಲಿ ಕುಡಿಯುವ ನೀರಿನ (Polluted Water) ಮುಖ್ಯ ಪೈಪ್ ಹೊಡೆದಿದ್ದು, ಅದರೊಳಗೆ ಚರಂಡಿ ನೀರು ಮಿಶ್ರಣವಾಗಿ ಕಲುಷಿತಗೊಂಡಿರುವ ಹಿನ್ನಲೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಇಲ್ಲಿನ ಕುಡಿಯುವ ನೀರಿನ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಆರೋಗ್ಯ ಇಲಾಖೆ ತಂಡವು ಗ್ರಾಮದಲ್ಲಿ ಬೀಡು ಬಿಟ್ಟಿದೆ. ಆರೋಗ್ಯದಲ್ಲಿ ಏರುಪೇರಾಗಿರುವವರಿಗೆ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳದಲ್ಲಿ ತುರ್ತು ಸಂದರ್ಭಕ್ಕಾಗಿ ಅಂಬುಲೆನ್ಸ್ ರವಾನಿಸಿಲಾಗಿದೆ. ಇದನ್ನೂ ಓದಿ: 12 ಮದುವೆ, 6 ಮಕ್ಕಳು – ವಿಧವೆಯರು, ಡಿವೋರ್ಸ್‌ ಪಡೆದ ಮಹಿಳೆಯರನ್ನೇ ಟಾರ್ಗೆಟ್‌ ಮಾಡ್ತಿದ್ದ ವಂಚಕ

ಬುಧವಾರ ಸಂಜೆ ಗ್ರಾಮಸ್ಥರಲ್ಲಿ ಅಸ್ವಸ್ಥತೆ ಶುರುವಾಗಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ರಾಂಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ತೀವ್ರ ಅಸ್ವಸ್ಥರಾಗಿರುವ ಓಬಕ್ಕ ಹಾಗೂ ಚಾಮುಂಡಮ್ಮ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗ್ರಾಮದಲ್ಲಿ ಪೈಪ್‌ಗಳ ದುರಸ್ತಿ ಕಾರ್ಯ ಮಾಡಲಾಗುತ್ತಿದ್ದು, ಈ ವೇಳೆ ಹಾನಿಯಾಗಿದ್ದ ಪೈಪ್‌ಗಳನ್ನು ರಿಪೇರಿ ಮಾಡದೇ ಗ್ರಾಪಂ ಅಧಿಕಾರಿಗಳ‌ ನಿರ್ಲಕ್ಷದಿಂದ ಈ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ಅಲ್ಲದೇ ಪರೀಕ್ಷೆಗೆ ತೆಗೆದುಕೊಂಡು ಹೋಗಿದ್ದ ಎರಡು ನೀರಿನ ಸ್ಯಾಂಪಲ್ ಪೈಕಿ ಒಂದು ನೀರಿನ ಸ್ಯಾಂಪಲ್ ಕುಡಿಯಲು ಯೋಗ್ಯವಲ್ಲ ಎಂದು ಸಹ ವರದಿ ಬಂದಿದೆ. ಈ ಘಟನೆ ಕುರಿತಾಗಿ ಚರ್ಚಿಸಿ, ಜಾಗೃತಿ ಮೂಡಿಸಲು ಮತ್ತು ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ ಮೂಡಿಸುವ ಸಲುವಾಗಿ ಗುರುವಾರದಂದು ಗ್ರಾಮದಲ್ಲಿ ಗ್ರಾಮ ಸಭೆ ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ: ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿದ ತಾಯಿ!

ಈಗಾಗಲೇ ಗ್ರಾಮದಲ್ಲಿ ತುರ್ತಾಗಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ತೆರೆದಿದ್ದು, ಅಗತ್ಯವಿರುವ ಔಷಧಿ ದಾಸ್ತಾನು ಮಾಡಲಾಗಿದೆ. ಮನೆಗಳ ಕುಡಿಯುವ ನೀರಿನ ಸ್ಯಾಂಪಲ್‌ಗಳನ್ನು ಸಂಗ್ರಹಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಜನರಿಗೆ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಪರ್ಯಾಯವಾಗಿ ಒದಗಿಸಿದ್ದಾರೆ. ನಾಗಸಮುದ್ರ ಗ್ರಾಮಕ್ಕೆ THO ಡಾ.ಮಧುಕುಮಾರ್ ಭೇಟಿ ‌ನೀಡಿ ಪರಿಶೀಲನೆ ನಡೆಸಿದ್ದು, ನಿರ್ಲಕ್ಷ ತೋರಿದ ಗ್ರಾಪಂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರಿಂದ ಆಕ್ರೋಶ ವ್ಯಕ್ತವಾಗಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್