ಕಲ್ಲಿದ್ದಲು ಗಣಿಯಲ್ಲಿ ಅಗ್ನಿ ಅವಘಡ – 32 ಮಂದಿ ಸಜೀವ ದಹನ

By
1 Min Read

ಅಸ್ತಾನ(ಕಜಕಿಸ್ತಾನ್): ಕಲ್ಲಿದ್ದಲು ಗಣಿಯಲ್ಲಿ (Coal Mine) ಸಂಭವಿಸಿದ ಅಗ್ನಿ ಅವಘಡದಲ್ಲಿ (Fire Accident )ಕನಿಷ್ಠ 32 ಜನರು ಸಾವನ್ನಪ್ಪಿದ್ದು, 14 ಮಂದಿ ನಾಪತ್ತೆಯಾದ ಘಟನೆ ಕಜಕಿಸ್ತಾನದಲ್ಲಿ (Kazakhstan) ನಡೆದಿದೆ.

ಲಕ್ಸೆಂಬರ್ಗ್ ಮೂಲದ ಆರ್ಸೆಲರ್ ಮಿತ್ತಲ್ ಟೆಮಿರ್ಟೌ ಕಂಪನಿಯ ಕಲ್ಲಿದ್ದಲು ಘಟಕದಲ್ಲಿ ಈ ಅವಘಡ ಸಂಭವಿಸಿದೆ. ಗಣಿಯಲ್ಲಿ 252 ಜನ ಕೆಲಸ ಮಾಡುತ್ತಿದ್ದರು. ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ 206 ಜನರನ್ನು ರಕ್ಷಿಸಿ ಸ್ಥಳಾಂತರಿಸಲಾಗಿದೆ. ಮೀಥೇನ್ ಅನಿಲ ಸೋರಿಕೆಯಿಂದ ಈ ಅವಘಡ ಸಂಭವಿಸಿದೆ. ಈ ದುರಂತ ಬಹಳ ದುರಾದೃಷ್ಟಕರವಾದದ್ದು ಎಂದು ಕಜಕಿಸ್ತಾನದ ಅಧ್ಯಕ್ಷ ಕಾಸಿಮ್-ಜೋಮಾರ್ಟ್ ಟೊಕಾಯೆವ್ ಹೇಳಿದ್ದಾರೆ. ಇದನ್ನೂ ಓದಿ: ಅಪ್ಪು ಅಗಲಿ ಇಂದಿಗೆ 2 ವರ್ಷ- ಪುನೀತ್ ಸಮಾಧಿಗೆ ದೊಡ್ಮನೆ ಕುಟುಂಬಸ್ಥರಿಂದ ಪೂಜೆ

ದುರಂತದ ಬಳಿಕ, ಮಿತ್ತಲ್ ಸಂಸ್ಥೆಯೊಂದಿಗಿನ ಸರ್ಕಾರದ ಹೂಡಿಕೆಯನ್ನು ವಾಪಸ್ ಪಡೆಯಲು ಆದೇಶಿಸಲಾಗಿದೆ. ಅಲ್ಲದೇ ಕಂಪನಿಯ ಘಟಕಗಳನ್ನು ಸರ್ಕಾರ ವಶಪಡಿಸಿಕೊಳ್ಳಲಿದೆ. ಸುರಕ್ಷತಾ ನಿಯಮಗಳನ್ನು ಪಾಲಿಸದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ದುರಂತದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಆಗಸ್ಟ್‌ನಲ್ಲೂ ಅಗ್ನಿ ಅವಘಡ ಸಂಭವಿಸಿ 9 ಜನ ಸಾವನ್ನಪ್ಪಿದ್ದರು. ಈ ವೇಳೆ ಪರಿಸರ ನಿಯಮಗಳ ಉಲ್ಲಂಘನೆ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು. ಆರ್ಸೆಲರ್ ಮಿತ್ತಲ್ ಟೆಮಿರ್ಟೌ ಲಕ್ಸೆಂಬರ್ಗ್ ಮೂಲದ ಬಹುರಾಷ್ಟ್ರೀಯ ಕಂಪನಿಯಾಗಿದ್ದು, ಇದು ವಿಶ್ವದ ಎರಡನೇ ಅತಿ ದೊಡ್ಡ ಉಕ್ಕನ್ನು ಉತ್ಪಾದಿಸುತ್ತದೆ. ಇದನ್ನೂ ಓದಿ: ಅಮೆರಿಕದಲ್ಲಿ ಗುಂಡಿನ ದಾಳಿ ನಡೆಸಿದ್ದ ಶೂಟರ್ 2 ದಿನಗಳ ಬಳಿಕ ಶವವಾಗಿ ಪತ್ತೆ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್