ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕಳೆಕಟ್ಟಿದ ರಾಯರ ಆರಾಧನೆ

Public TV
1 Min Read

ರಾಯಚೂರು: ಮಂತ್ರಾಲಯದಲ್ಲಿ ನಡೆಯುತ್ತಿರುವ ಗುರು ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಅದ್ದೂರಿಯಾಗಿ ಜರುಗುತ್ತಿದೆ. ಪೂರ್ವಾರಾಧನೆ ಹಿನ್ನೆಲೆ ಇಂದು ನಾನಾ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಇಂದು ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಣ್ಯರಿಗೆ ಅಭಿನಂದನಾ ಸನ್ಮಾನ ನಡೆಯಿತು. ವಿವಿಧ ಕಲಾವಿದರರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನಾಳೆ ಆಗಸ್ಟ್ 24 ರಂದು ರಾಯರ ಮಧ್ಯಾರಾಧನೆ ನಡೆಯಲಿದೆ. ಇದನ್ನೂ ಓದಿ: ಶ್ರೀಗುರು ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ

ರಾಯರು ಸಶರೀರವಾಗಿ ವೃಂದಾವನಸ್ಥರಾಗಿ 350 ವರ್ಷಗಳಾಗಲಿವೆ. ರಾಯರು 700 ವರ್ಷ ಕಾಲ ವೃಂದಾವನದಲ್ಲಿರುತ್ತಾರೆ ಎನ್ನುವ ಪ್ರತೀತಿಯಿದೆ. ಈ ಹಿನ್ನೆಲೆಯಲ್ಲಿ ಈ ವರ್ಷದ 350ನೇ ಆರಾಧನಾ ಮಹೋತ್ಸವಕ್ಕೆ ವಿಶೇಷತೆಯಿದ್ದು, 700 ವರ್ಷ ಅವಧಿಯ ಮಧ್ಯಭಾಗವೇ ಈ ವರ್ಷದ ಮಧ್ಯಾರಾಧನೆಯಾಗಿದೆ. ಮಧ್ಯಾರಾಧನೆ ಹಿನ್ನೆಲೆ ತಿರುಮಲ ತಿರುಪತಿ ದೇವಾಲಯದಿಂದ ರಾಯರಿಗೆ ಶೇಷವಸ್ತ್ರ ಸಮರ್ಪಣೆ ನಡೆಯಲಿದೆ. ಮಠದ ಪ್ರಾಂಗಣದಲ್ಲಿ ಚಿನ್ನದ ರಥೋತ್ಸವ ನಡೆಯಲಿದೆ. ಇದನ್ನೂ ಓದಿ: ಮಂತ್ರಾಲಯ ಶ್ರೀಗಳಿಂದ ಹೊಸ ಸಂಪ್ರದಾಯಕ್ಕೆ ನಾಂದಿ – ಸ್ವಾಮೀಜಿಗಳ ರಕ್ಷಣೆಗೆ ಬೌನ್ಸರ್​​​ಗಳ ನೇಮಕ

Share This Article
Leave a Comment

Leave a Reply

Your email address will not be published. Required fields are marked *