ರಾಜ್ಯದಲ್ಲಿ 373 ಪಾಸಿಟಿವ್, 4 ಸಾವು – 29 ಜಿಲ್ಲೆಗಳಲ್ಲಿ ಶೂನ್ಯ ಮರಣ

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 373 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 4 ಮರಣ ಪ್ರಕರಣ ದಾಖಲಾಗಿದೆ. ನಾಲ್ಕು ಮರಣ ಪ್ರಕರಣ ಕೂಡ ಬೆಂಗಳೂರಿನಲ್ಲಿ ದಾಖಲಾಗಿದ್ದು, ಉಳಿದ 29 ಜಿಲ್ಲೆಗಳಲ್ಲಿ ಶೂನ್ಯ ಮರಣ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ 292 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 7,332 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,99,471 ಮಂದಿಗೆ ಕೊರೊನಾ ಬಂದಿದೆ. 29,53,857 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.31 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.07 ರಷ್ಟಿದೆ. ಇಂದು ಬೆಂಗಳೂರು ನಗರದಲ್ಲಿ 211 ಮಂದಿಗೆ ಕೊರೊನಾ ಬಂದಿದ್ದು, 133 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇದನ್ನೂ ಓದಿ: ಟೊಮೆಟೊ ಕದ್ದ ಖಾಕಿ ಸಮವಸ್ತ್ರಧಾರಿ – ವೀಡಿಯೋ ವೈರಲ್

ರಾಜ್ಯದಲ್ಲಿ ಇಂದು ಒಟ್ಟು 2,41,239 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,18,227 ಸ್ಯಾಂಪಲ್ (ಆರ್​ಟಿಪಿಸಿಆರ್ 99,784 + 18,443 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಕೊನೆ ಕ್ಷಣದಲ್ಲಿ ಬಿಪಿನ್‌ ರಾವತ್‌ ಕುಡಿಯಲು ನೀರು ಕೇಳಿದ್ದರು- ಪ್ರತ್ಯಕ್ಷದರ್ಶಿ ಮಾತು

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 0, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 211, ಬೆಂಗಳೂರು ನಗರ 211, ಬೀದರ್ 0, ಚಾಮರಾಜನಗರ 3, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 9, ಚಿತ್ರದುರ್ಗ 0, ದಕ್ಷಿಣ ಕನ್ನಡ 10, ದಾವಣಗೆರೆ 2, ಧಾರವಾಡ 11, ಗದಗ 0, ಹಾಸನ 12, ಹಾವೇರಿ 0, ಕಲಬುರಗಿ 0, ಕೊಡಗು 21, ಕೋಲಾರ 1, ಕೊಪ್ಪಳ 0, ಮಂಡ್ಯ 4, ಮೈಸೂರು 18, ರಾಯಚೂರು 0, ರಾಮನಗರ 0, ಶಿವಮೊಗ್ಗ 30, ತುಮಕೂರು 11, ಉಡುಪಿ 6, ಉತ್ತರ ಕನ್ನಡ 8, ವಿಜಯಪುರ 1 ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *