ಪ್ರಪಾತಕ್ಕೆ ಉರುಳಿದ ಬಸ್- 38 ಮಂದಿಗೆ ಗಾಯ, 9 ಪೊಲೀಸರು ಗಂಭೀರ

Public TV
1 Min Read

ಗಾಂಧಿನಗರ: ಗುಜರಾತ್‍ನ (Gujarat) ಪಂಚಮಹಲ್‍ನ ಗುಡ್ಡಗಾಡು ಪ್ರದೇಶದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ (Accident) 38 ರಾಜ್ಯ ರಿಸರ್ವ್ ಪೊಲೀಸ್ (ಎಸ್‍ಆರ್‌ಪಿ) ಸಿಬ್ಬಂದಿ ಗಾಯಗೊಂಡಿದ್ದು, ಅದರಲ್ಲಿ ಒಂಬತ್ತು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಗುಡ್ಡಗಾಡು ಪ್ರದೇಶದಲ್ಲಿ ಬಸ್ ಸಂಚರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಬಸ್ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ. ಇದರಿಂದಾಗಿ ಹೆಚ್ಚಿನ ಜನರಿಗೆ ಗಾಯವಾಗಿದೆ. ಪೊಲೀಸರು (Police) ಪಾವಗಡದಲ್ಲಿ ಫೈರಿಂಗ್ ಅಭ್ಯಾಸ ಮುಗಿಸಿ ದಾಹೋದ್ ನಗರಕ್ಕೆ ಹಿಂದಿರುಗುತ್ತಿದ್ದರು ಎಂದು ತಿಳಿದು ಬಂದಿದೆ.ಇದನ್ನೂ ಓದಿ: ಮುಕೇಶ್‌ ಅಂಬಾನಿಗೆ 3ನೇ ಬಾರಿಗೆ ಕೊಲೆ ಬೆದರಿಕೆ – ಬೇಡಿಕೆ ಮೊತ್ತ 400 ಕೋಟಿಗೆ ಏರಿಕೆ

ಬಸ್ಸಿನಲ್ಲಿದ್ದ 50 ಜನ ಪೊಲೀಸರು ಪ್ರಯಾಣಿಸುತ್ತಿದ್ದರು. ಈ ಪೈಕಿ 38 ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದ 29 ಮಂದಿಯನ್ನು ಪ್ರಥಮ ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ. ಒಂಬತ್ತು ಮಂದಿ ತೀವ್ರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಡೋದರಾದ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಯಲ್ಲಿ ಬೆಡ್ ಕೊರತೆ- ಪುತ್ರನನ್ನು ಕಳೆದುಕೊಂಡ ಬಿಜೆಪಿಯ ಮಾಜಿ ಸಂಸದ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್