ರಾಮನಗರ: ಬಿಡದಿ (Bidadi) ಸಮೀಪದ ಬೀಮೇನಹಳ್ಳಿ ಬಳಿ ಸಂಭವಿಸಿದ್ದ ಅಗ್ನಿ ದುರಂತದಲ್ಲಿ (Fire Accident) ಗಾಯಗೊಂಡಿದ್ದ 7 ಕಾರ್ಮಿಕರ ಪೈಕಿ, 4 ಮಂದಿ ಕಾರ್ಮಿಕರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಜಾಯಿದ್ ಅಲಿ, ಶಪೀಜುಲ್ ಶೇಕ್, ಮನ್ರೂಲ್ ಶೇಕ್, ಜಿಯಾಬುರ್ ಶೇಕ್ ಮೃತ ಕಾರ್ಮಿಕರಾಗಿದ್ದಾರೆ. ಮಂಗಳವಾರ (ಅ.7) ಶೆಡ್‌ನಲ್ಲಿ ಗ್ಯಾಸ್ ಲೀಕ್ ಆಗಿ ಈ ಅಗ್ನಿ ಅವಘಡ ಸಂಭವಿಸಿತ್ತು. ಈ ಅವಘಡದಲ್ಲಿ 7 ಮಂದಿಗೆ ಸುಟ್ಟಗಾಯಗಳಾಗಿದ್ದವು. ಗಾಯಾಳುಗಳನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಥೈಲ್ಯಾಂಡ್‌ನಲ್ಲಿ ಶೂಟಿಂಗ್ ಆಗಿದ್ದ ದರ್ಶನ್ ಸಾಂಗ್ ರಿಲೀಸ್
ಗಾಯಗೊಂಡ ಮೂವರು ಕಾರ್ಮಿಕರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಘಟನೆಗೆ ಕಟ್ಟಡ ನಿರ್ಮಾಣ ಸಂಸ್ಥೆಯ ನಿರ್ಲಕ್ಷ್ಯ ಕಾರಣ ಎಂದು ಕಾರ್ಮಿಕ ಸಂಘಟನೆಗಳು ಆರೋಪಿಸಿವೆ. ಸೂಕ್ತ ಪರಿಹಾರಕ್ಕೆ ಒತ್ತಾಯಿಸಿವೆ. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕನಕರಾಜನಾದ ನಟ ಅನೂಪ್ ರೇವಣ್ಣ – ಇದು ಸಿಎಂ ಅಭಿಮಾನಿ ಸ್ಟೋರಿ