ಮುಂಬೈ: ಬೆಸ್ಟ್ ಬಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ರಾತ್ರಿ 10 ಗಂಟೆ ಸುಮಾರಿಗೆ ಮುಂಬೈನ (Mumbai) ಭಾಂಡಪ್‌ನಲ್ಲಿ ಈ ಘಟನೆ ನಡೆದಿದೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೃಹನ್ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆಯ ಬಸ್, ದೇಶದ ಅತಿದೊಡ್ಡ ಸಾರ್ವಜನಿಕ ಸಂಚಾರಿ ಬಸ್ ಆಗಿದೆ. ಪಾದಚಾರಿಗಳಿಗೆ ಡಿಕ್ಕಿ ಹೊಡೆಯುವ ಮೊದಲು ಬಸ್ ನಿಯಂತ್ರಣ ಕಳೆದುಕೊಂಡಿತ್ತು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಚಾಲಕ ಬಸ್ ಅನ್ನು ಅದರ ಮಾರ್ಗದ ಕೊನೆಯಲ್ಲಿ ಹಿಮ್ಮುಖವಾಗಿ ಚಲಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಜೆಸಿಬಿಗಳ ಘರ್ಜನೆ – ರಸ್ತೆ ಬದಿಯ ಗೂಡಂಗಡಿಗಳ ತೆರವು
ಹಿರಿಯ ಅಧಿಕಾರಿಗಳು ತುರ್ತು ಪ್ರತಿಕ್ರಿಯೆ ತಂಡಗಳಿಗೆ ಸಹಾಯ ಮಾಡಲು ಸ್ಥಳಕ್ಕೆ ಧಾವಿಸಿದರು. ಬಸ್ ಚಾಲಕ ಸಂತೋಷ್ ರಮೇಶ್ ಸಾವಂತ್ (52) ಬಸ್ ಚಲಾಯಿಸುತ್ತಿದ್ದರು. ಭಗವಾನ್ ಭಾವು ಘರೆ (47) ಕಂಡಕ್ಟರ್ ಆಗಿ ಕರ್ತವ್ಯದಲ್ಲಿದ್ದರು.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಲಾ 5 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ. ಇದು ದುರದೃಷ್ಟಕರ ಘಟನೆ ಎಂದು ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಉತ್ತರ ಕನ್ನಡ| ಒಂದೇ ವರ್ಷದಲ್ಲಿ 704 ಕಡೆ ಆನೆ ದಾಳಿಯಿಂದ ಬೆಳೆ ಹಾನಿ; 23 ಲಕ್ಷ ಹಣ ಪರಿಹಾರ ಬಾಕಿ

