ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ – ನಾಲ್ವರು ಭಾರತೀಯರು ಸೇರಿದಂತೆ 16 ಮಂದಿ ಸಾವು

Public TV
1 Min Read

ದುಬೈ: ದುಬೈನ (Dubai) ದೇರಾ ಬುರ್ಜ್ ಮುರಾರ್ ಪ್ರದೇಶದ ಅಪಾರ್ಟ್‌ಮೆಂಟ್‌ನಲ್ಲಿ (Apartment) ನಡೆದ ಬೆಂಕಿ ಅವಘಡದಲ್ಲಿ ನಾಲ್ವರು ಭಾರತೀಯರು (Indians) ಸೇರಿದಂತೆ 16 ಮಂದಿ ಜನರು ಸಾವನ್ನಪ್ಪಿದ್ದಾರೆ.

ನಗರದ ಹಳೆಯ ಭಾಗದಲ್ಲಿರುವ ಅಲ್-ರಾಸ್ ಸಮೀಪವಿರುವ ಕಟ್ಟಡದ 4ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೂಲಗಳ ಪ್ರಕಾರ ಕೇರಳ ಮತ್ತು ತಮಿಳುನಾಡಿನ ತಲಾ ಇಬ್ಬರು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ನು ಕೇರಳ (Kerala) ಮೂಲದ ರಿಜೇಶ್ (38) ಮತ್ತು ಅವರ ಪತ್ನಿ ಜಿಶಿ (32) ಹಾಗೂ ಇನ್ನಿಬ್ಬರು ತಮಿಳುನಾಡು (Tamil nadu) ಮೂಲದ ಅಬ್ದುಲ್ ಖಾದರ್ ಮತ್ತು ಸಲಿಯಾಕುಂಡ್ ಎಂದು ಗುರುತಿಸಲಾಗಿದೆ.

crime

ಮೃತರು ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಕೇರಳದ ದಂಪತಿ ಹಾಗೂ ತಮಿಳುನಾಡಿನ ಇಬ್ಬರು ವ್ಯಕ್ತಿಗಳಾಗಿದ್ದರು. ಜೊತೆಗೆ 3 ಪಾಕಿಸ್ತಾನಿ ಸೋದರಸಂಬಂಧಿಗಳು ಮತ್ತು ನೈಜೀರಿಯಾದ ಮಹಿಳೆಯೂ ಬೆಂಕಿ ಅವಘಡದಲ್ಲಿ ಮೃತಪಟ್ಟಿದ್ದಾರೆ. ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಗ್ನಿ ಶಾಮಕ ದಳವು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯವನ್ನು ಆರಂಭಿಸಿತು. ಈ ವೇಳೆ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: ರಾಜ್ಯ ಸರ್ಕಾರ ಜನರ ಹಣ ಕದ್ದಿದೆ: ರಾಗಾ ಆರೋಪ

ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿ ಅವಘಡದ ಬಗ್ಗೆ ಭಾರತೀಯ ರಾಯಭಾರಿ ಕಚೇರಿ ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಇದನ್ನೂ ಓದಿ: ಸುಡಾನ್ ಸೈನಿಕರ ಸಂಘರ್ಷ – ಗುಂಡೇಟಿಗೆ ಭಾರತ ಮೂಲದ ವ್ಯಕ್ತಿ ಬಲಿ

Share This Article