ಅಮೆರಿಕದಲ್ಲಿ ಕಾರು ಅಪಘಾತ; ನಾಪತ್ತೆಯಾಗಿದ್ದ ಭಾರತೀಯ ಮೂಲದ ನಾಲ್ವರ ಮೃತದೇಹ ಪತ್ತೆ

Public TV
1 Min Read

ವಾಷಿಂಗ್ಟನ್: ಪಶ್ಚಿಮ ವರ್ಜೀನಿಯಾದ ಆಧ್ಯಾತ್ಮಿಕ ಸ್ಥಳಕ್ಕೆ ಹೋಗುವ ಮಾರ್ಗಮಧ್ಯೆ ನಾಪತ್ತೆಯಾಗಿದ್ದ ನ್ಯೂಯಾರ್ಕ್ನ ಒಂದೇ ಕುಟುಂಬದ ಭಾರತೀಯ ಮೂಲದ ನಾಲ್ವರು ಶವವಾಗಿ ಪತ್ತೆಯಾಗಿದ್ದಾರೆ.

ಮೃತರನ್ನು ಆಶಾ ದಿವಾನ್ (85), ಕಿಶೋರ್ ದಿವಾನ್ (89), ಶೈಲೇಶ್ ದಿವಾನ್ (86) ಮತ್ತು ಗೀತಾ ದಿವಾನ್ (84) ಎಂದು ಗುರುತಿಸಲಾಗಿದೆ.

ಕುಟುಂಬವು ಬಫಲೋದಿಂದ ಪಶ್ಚಿಮ ವರ್ಜೀನಿಯಾದ ಮಾರ್ಷಲ್ ಕೌಂಟಿಯಲ್ಲಿರುವ ಪ್ರಭುಪಾದರ ಪ್ಯಾಲೇಸ್ ಆಫ್ ಗೋಲ್ಡ್ಗೆ ಟೊಯೊಟಾ ಕ್ಯಾಮ್ರಿಯಲ್ಲಿ ನ್ಯೂಯಾರ್ಕ್ ಪರವಾನಗಿ ಪ್ಲೇಟ್ ಇಏW2611 ಅನ್ನು ಹೊಂದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಯಾರ್ಕ್ನ ಬಫಲೋದಿಂದ ನಾಪತ್ತೆಯಾಗಿದ್ದ ನಾಲ್ವರು, ವಾಹನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಮಾರ್ಷಲ್ ಕೌಂಟಿ ಶೆರಿಫ್ ಮೈಕ್ ಡೌಘರ್ಟಿ ದೃಢಪಡಿಸಿದ್ದಾರೆ.

ಶನಿವಾರ ರಾತ್ರಿ 9:30 ರ ಸುಮಾರಿಗೆ (ಸ್ಥಳೀಯ ಸಮಯ) ಬಿಗ್ ವೀಲಿಂಗ್ ಕ್ರೀಕ್ ರಸ್ತೆಯ ಕಡಿದಾದ ಒಡ್ಡಿನಲ್ಲಿ ಮೃತದೇಹಗಳು ಮತ್ತು ಅಪಘಾತಕ್ಕೀಡಾದ ವಾಹನ ಪತ್ತೆಯಾಗಿದೆ ಎಂದು ಶೆರಿಫ್ ತಿಳಿಸಿದ್ದಾರೆ.

ಹಿರಿಯ ನಾಗರಿಕರು ಕೊನೆಯ ಬಾರಿಗೆ ಜು.29 ರಂದು ಪೆನ್ಸಿಲ್ವೇನಿಯಾದ ಬರ್ಗರ್ ಕಿಂಗ್ ಔಟ್‌ಲೆಟ್‌ನಲ್ಲಿ ಕಾಣಿಸಿಕೊಂಡಿದ್ದರು ಎಂದು ವರದಿಯಾಗಿದೆ. ಬರ್ಗರ್ ಕಿಂಗ್ ಔಟ್‌ಲೆಟ್‌ನ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಗುಂಪಿನ ಇಬ್ಬರು ಸದಸ್ಯರು ರೆಸ್ಟೋರೆಂಟ್‌ಗೆ ಪ್ರವೇಶಿಸುತ್ತಿರುವುದು ಕಂಡುಬAದಿದೆ. ಅವರ ಕೊನೆಯ ಕ್ರೆಡಿಟ್ ಕಾರ್ಡ್ ವಹಿವಾಟು ಸಹ ಅದೇ ಸ್ಥಳದಲ್ಲಿ ಪತ್ತೆಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share This Article