ಭಾರೀ ಮಳೆಗೆ ಮನೆಯ ಗೋಡೆ ಕುಸಿದು ನಾಲ್ವರ ದುರ್ಮರಣ

Public TV
1 Min Read

ಮಂಗಳೂರು: ಮನೆಯ ಗೋಡೆ ಕುಸಿದು ಬಿದ್ದು ನಾಲ್ವರು‌ ದುರ್ಮರಣಕ್ಕೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರದಲ್ಲಿ ನಡೆದಿದೆ.

ಮೃತರನ್ನು ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ನಂದಿನಿ ಹಾಲಿನ ದರ ಹೆಚ್ಚಳ- ಹಳೆಯ ಪ್ಯಾಕೆಟ್‌ಗೂ ಹೊಸ ಬೆಲೆ, ಗ್ರಾಹಕರ ಆಕ್ರೋಶ

ಸೋಮವಾರ ರಾತ್ರಿ ಭಾರೀ ಮಳೆ ಸುರಿದ ಪರಿಣಾಮ ಮನೆಯ ಗೋಡೆ ಕುಸಿದು ಮನೆಯೊಳಗಿದ್ದ ನಾಲ್ವರು ಮೃತಟ್ಟಿದ್ದಾರೆ. ಸದ್ಯ ಮೂವರ ಮೃತದೇಹವನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಮತ್ತೊಬ್ಬ ಬಾಲಕಿ ಮೃತದೇಹಕ್ಕಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.

Share This Article