ರಾಯಚೂರು ಆರ್‌ಟಿಪಿಎಸ್‌ನ 4 ವಿದ್ಯುತ್ ಘಟಕಗಳು ಬಂದ್ – ವಿದ್ಯುತ್ ಕ್ಷಾಮ ಭೀತಿ

Public TV
1 Min Read

ರಾಯಚೂರು: ರಾಯಚೂರಿನ (Raichuru) ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್‌ಟಿಪಿಎಸ್‌ನ (RTPS) ನಾಲ್ಕು ಘಟಕಗಳು ಸ್ಥಗಿತವಾಗಿದ್ದು, ರಾಜ್ಯಕ್ಕೆ ವಿದ್ಯುತ್ ಕೊರತೆಯ ಶಾಕ್ ಎದುರಾಗಿದೆ.

ಬರಗಾಲ ಹಿನ್ನೆಲೆ ರಾಜ್ಯದಲ್ಲಿ ಈಗಾಗಲೇ ಎಲ್ಲೆಡೆ ನೀರಿಗಾಗಿ ಹಾಹಾಕಾರ ಎದ್ದಿದೆ. ಈಗ ಬಿರು ಬೇಸಿಗೆಯಲ್ಲಿ ವಿದ್ಯುತ್ ಕ್ಷಾಮ ಸಹ ಎದುರಾಗುವ ಭೀತಿ ಉಂಟಾಗಿದೆ. ರಾಜ್ಯಕ್ಕೆ ಶೇ.40 ರಷ್ಟು ವಿದ್ಯುತ್ ಪೂರೈಸುವ ವಿದ್ಯುತ್ ಕೇಂದ್ರದಲ್ಲಿ ತಾಂತ್ರಿಕ ಸಮಸ್ಯೆ ತಲೆದೂರಿದ್ದು, ಆರ್‌ಟಿಪಿಎಸ್‌ನ ಎಂಟು ಘಟಕಗಳಲ್ಲಿ ನಾಲ್ಕು ಘಟಕ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತಗೊಳಿಸಿವೆ. ಇದನ್ನೂ ಓದಿ: ಬಿಜೆಪಿ ನಡೆಗೆ ಬೇಸರ; ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಶ್ರೀನಿವಾಸ್‌ ಪ್ರಸಾದ್‌ ಬೆಂಬಲ?

ಬಾಯ್ಲರ್ ಟ್ಯೂಬ್ ಲೀಕೇಜ್ ಹಾಗೂ ಬಂಕ್ಲರ್ ಸಮಸ್ಯೆಯಿಂದ ಘಟಕಗಳು ಸ್ಥಗಿತಗೊಂಡಿವೆ. 1720 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಕೇಂದ್ರದಲ್ಲಿ ಈಗ ಕೇವಲ 665 ಮೆಗಾ ವ್ಯಾಟ್ ಉತ್ಪಾದನೆಯಾಗುತ್ತಿದೆ.

ವಿದ್ಯುತ್ ಕೇಂದ್ರದ 1,2,3 ಹಾಗೂ 6 ನೇ ಘಟಕ ಬಂದ್ ಆಗಿದ್ದು, ಬೇಸಿಗೆಯಲ್ಲಿ ಹೆಚ್ಚು ಒತ್ತಡ ಇರುವ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲೇ ಉತ್ಪಾದನೆ ಕುಂಠಿತವಾಗಿದೆ. ನೀರಿನ ಸಮಸ್ಯೆ ಬೆನ್ನಲ್ಲೆ ತಾಂತ್ರಿಕ ಸಮಸ್ಯೆಯಿಂದ ಘಟಕಗಳು ಬಂದ್ ಆಗಿದ್ದು, ಬೇಸಿಗೆಯಲ್ಲಿ ವಿಪರೀತ ಲೋಡ್ ಶೆಡ್ಡಿಂಗ್ ಭೀತಿ ಎದುರಾಗಿದೆ. ಇದನ್ನೂ ಓದಿ: ಅಕ್ರಮ ಗೋಮಾಂಸ ಮಾರಾಟಕ್ಕೆ 60 ಕ್ಕೂ ಹೆಚ್ಚು ಗೋವುಗಳ ವಧೆ – 10 ಸಾವಿರ ಕೆಜಿ ಗೋಮಾಂಸ ಪೊಲೀಸರ ವಶಕ್ಕೆ

Share This Article