ನೇಪಾಳದಲ್ಲಿ ಸಿಲುಕಿದ್ದಾರೆ ರಾಮನಗರದ 4 ಮಂದಿ ಪ್ರವಾಸಿಗರು

Public TV
1 Min Read

– ಬೆಂಗಳೂರಿನ 50 ಜನರ ಜೊತೆ ನೇಪಾಳ ಪ್ರವಾಸ

ರಾಮನಗರ: ನೇಪಾಳದಲ್ಲಿ (Nepal) ಹಿಂಸಾತ್ಮಕ ಪ್ರತಿಭಟನೆಯ ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪ್ರವಾಸಕ್ಕೆಂದು ತೆರಳಿದ್ದ ರಾಮನಗರದ (Ramanagara) 4 ಮಂದಿ ಪ್ರವಾಸಿಗರು ನೇಪಾಳದಲ್ಲಿ ಸಿಲುಕಿದ್ದಾರೆ.

ಪ್ರವಾಸಿಗರು ಬೆಂಗಳೂರಿನ 50 ಜನರ ಜೊತೆ ನೇಪಾಳ ಪ್ರವಾಸ ಕೈಗೊಂಡಿದ್ದರು. ನೇಪಾಳದ ಕಠ್ಮಂಡುವಿನ ಹೋಟೆಲ್‌ನಲ್ಲಿ ಕರ್ನಾಟಕದ 50 ಮಂದಿ ಪ್ರವಾಸಿಗರು ಸಿಲುಕಿದ್ದಾರೆ. ಇಂದು ಕಠ್ಮಂಡುವಿನಿಂದ ಜನಕ್ ಪುರ್‌ದ ಡಿಯೊಗರ್ ವಿಮಾನ ನಿಲ್ದಾಣಕ್ಕೆ ಪ್ರವಾಸಿಗರು ಪ್ರಯಾಣಿಸಲಿದ್ದಾರೆ. ಇದನ್ನೂ ಓದಿ: ರಾಮನನ್ನು ವಿರೋಧಿಸಿದ್ದಕ್ಕೆ ಅಧಿಕಾರ ಹೋಯ್ತು: ಭಾರತದ ಮೇಲೆ ಗೂಬೆ ಕೂರಿಸಿದ ನೇಪಾಳದ ಮಾಜಿ ಪ್ರಧಾನಿ

ಸೆ. 1ರಂದು ಬೆಂಗಳೂರಿನ ಏರ್‌ಪೋರ್ಟ್‌ನಿಂದ ಪ್ರವಾಸಿಗರು ನೇಪಾಳಕ್ಕೆ ಪ್ರಯಾಣ ಬೆಳೆಸಿದ್ದರು. 13 ದಿನಗಳ ಪ್ರವಾಸಕ್ಕೆಂದು ತೆರಳಿದ್ದ ಕನ್ನಡಿಗರು, ಬೆಂಗಳೂರಿಂದ ವಾರಣಾಸಿ, ಅಯೋಧ್ಯೆ ಬಳಿಕ ನೇಪಾಳ ಬಾರ್ಡರ್ ತಲುಪಿದ್ದರು. ನೇಪಾಳದ ಸೋನಾಲಿ ಬಾರ್ಡರ್‌ಗೆ ತಲುಪಿ ಸೆ.8ರಂದು ಪೊಕ್ರಾದಿಂದ ಕಠ್ಮಂಡು ಕಡೆ ಪ್ರಯಾಣ ಬೆಳೆಸಿದ್ದರು. ಇದನ್ನೂ ಓದಿ: ನೇಪಾಳ ಹಿಂಸಾಚಾರಕ್ಕೆ ಸ್ಥಗಿತಗೊಂಡಿದ್ದ ಕಠ್ಮಂಡು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಓಪನ್

ಮನೋಕಾಮನಾ ದೇವಿ ದರ್ಶನ ಮುಗಿಸಿ ಹೊರಟಾಗ ಅಲ್ಲಿನ ಗಲಾಟೆ ಬಗ್ಗೆ ಮಾಹಿತಿ ದೊರೆತಿದೆ. ಸದ್ಯ ಕಠ್ಮಂಡುವಿನ ಪ್ರೈಮ್‌ಶೂಟ್ ಹೋಟೆಲ್‌ನಲ್ಲಿ ಕನ್ನಡಿಗರು ವಾಸ್ತವ್ಯ ಹೂಡಿದ್ದಾರೆ. ಕಠ್ಮಂಡುವಿನ ಪಶುಪತಿನಾಥ ದೇವರ ದರ್ಶನ ಪಡೆದು ಹೊರ ಬರುವಾಗ ಗಲಾಟೆ ಆರಂಭವಾಗಿದೆ. ಸೆ.9ರಂದು 11 ಗಂಟೆಗೆ ಗಲಾಟೆ ಆರಂಭವಾಗಿದ್ದು, ಪ್ರವಾಸಿಗರು ಆತಂಕಕ್ಕೆ ಒಳಗಾಗಿದ್ದಾರೆ. ಸದ್ಯ ಪರಿಸ್ಥಿತಿ ಸುಧಾರಿಸುತ್ತಿದ್ದು. ಸೆ.13ರಂದು ಪ್ರವಾಸಿಗರು ವಾಪಸ್ ಆಗಲಿದ್ದಾರೆ. ಇದನ್ನೂ ಓದಿ: ನೇಪಾಳದ 18 ಜಿಲ್ಲೆಗಳ ಜೈಲಿನಿಂದ 6 ಸಾವಿರಕ್ಕೂ ಹೆಚ್ಚು ಕೈದಿಗಳು ಪರಾರಿ

Share This Article