ಶಾಲೆಯ ಗುಮಾಸ್ತನಿಂದ 4ರ ಬಾಲಕಿಗೆ ಕಿರುಕುಳ

Public TV
1 Min Read

ನವದೆಹಲಿ: ಗುಮಾಸ್ತ (Peon) ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ 4 ವರ್ಷದ ಬಾಲಕಿಗೆ (Girl) ಕಿರುಕುಳ ನೀಡಿದ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ (New Delhi) ಶಾಲೆಯಲ್ಲಿ (School) ನಡೆದಿದೆ.

43 ವರ್ಷದ ದೆಹಲಿಯ ಸುಲ್ತಾನಪುರಿ ನಿವಾಸಿ ಬಂಧಿತ ವ್ಯಕ್ತಿ. 4 ವರ್ಷದ ಬಾಲಕಿಯು ಶಾಲೆಯಲ್ಲಿ ಆಟವಾಡುತ್ತಿದ್ದಾಗ ಗುಮಾಸ್ತ ಕಿರುಕುಳ ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ಬಾಲಕಿಯ ತಾಯಿಯು ಗುಮಾಸ್ತನ ವಿರುದ್ಧ ದಕ್ಷಿಣ ರೋಹಿಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಮತ್ತೆ ದಲಿತ ಸಿಎಂ ಕೂಗು- ಪ್ರಿಯಾಂಕ್ ಖರ್ಗೆ ಪರ ಕ್ಯಾಂಪೇನ್

ಸಂತ್ರಸ್ತೆ ನೀಡಿದ ಮಾಹಿತಿಯಂತೆ ಗುಮಾಸ್ತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಗೆ ನಗರದ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. ದಕ್ಷಿಣ ರೋಹಿಣಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಮತ್ತು ಪೋಕ್ಸೋ ಕಾಯ್ದೆಯ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿನ 4 ಮತ ಎಣಿಕಾ ಕೇಂದ್ರಗಳಿಗೆ ಬಿಗಿ ಬಂದೋಬಸ್ತ್- 1,500 ಪೊಲೀಸರ ನಿಯೋಜನೆ

Share This Article