ಲಕ್ನೋ: ಸ್ಕೂಲ್ ವ್ಯಾನ್‌ನಲ್ಲಿ (School Van) 4 ವರ್ಷದ ಬಾಲಕಿ ಮೇಲೆ ಚಾಲಕ ಅತ್ಯಾಚಾರವೆಸಗಿದ ಘಟನೆ ಉತ್ತರಪ್ರದೇಶದಲ್ಲಿ (Uttar Pradesh) ನಡೆದಿದ್ದು, ಆರೋಪಿಯನ್ನು ಯುಪಿ ಪೊಲೀಸರು ಬಂಧಿಸಿದ್ದಾರೆ.
ಮೊಹಮ್ಮದ್ ಆರಿಫ್ ಬಂಧಿತ ಶಾಲಾ ವಾಹನ ಚಾಲಕ. ಈ ಪ್ರಕರಣದ ತನಿಖೆಗಾಗಿ ಎರಡು ತಂಡಗಳನ್ನು ರಚಿಸಲಾಗಿದೆ ಎಂದು ಪೂರ್ವ ಪೊಲೀಸ್ ಉಪ ಆಯುಕ್ತ (DCP) ಶಶಾಂಕ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಟೇಕಾಫ್ ಆಗಿ 16 ನಿಮಿಷಕ್ಕೆ ಲ್ಯಾಂಡ್ ಆಯ್ತು ಏರ್ ಇಂಡಿಯಾ ವಿಮಾನ
ಜುಲೈ 17 ರಂದು ಬಾಲಕಿಯ ತಾಯಿ ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನ್ನ 4 ವರ್ಷದ ಮಗಳು ಶಾಲೆಯಲ್ಲಿ ಓದುತ್ತಿದ್ದು, ಸ್ಕೂಲ್ ವ್ಯಾನ್ ಚಾಲಕ ಆರಿಫ್ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ಬಗ್ಗೆ ಶಾಲಾ ಪ್ರಾಂಶುಪಾಲರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಾಯಿ ಆರೋಪಿಸಿದ್ದಾರೆ. ಇದನ್ನೂ ಓದಿ: ಕಲಬುರಗಿ ಜ್ಯುವೆಲರಿ ಶಾಪ್ ದರೋಡೆ ಕೇಸ್ – 30 ರೂ. ಫೋನ್ ಪೇ ಮಾಡಿ ಸಿಕ್ಕಿಬಿದ್ದ ಖದೀಮರು
ನನ್ನ ಮಗಳು ಖಾಸಗಿ ಭಾಗದಲ್ಲಿ ನೋವಿನ ಬಗ್ಗೆ ನನಗೆ ತಿಳಿಸಿದ್ದಳು. ಅವಳನ್ನು ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದಾಗ ಖಾಸಗಿ ಭಾಗದಲ್ಲಿ ಗಾಯಗಳಾಗಿರುವುದು ಕಂಡುಬಂದಿದೆ. ಈ ಕುರಿತು ನಾನು ಪ್ರಾಂಶುಪಾಲರಿಗೆ ದೂರು ನೀಡಿದ್ದೇನೆ. ಪ್ರಾಂಶುಪಾಲರು ಅದರ ಬಗ್ಗೆ ಮಾತನಾಡುವುದಾಗಿ ಹೇಳಿದರು. ಅಲ್ಲದೇ ದೂರು ನೀಡುವುದರಿಂದ ಮಗುವಿನ ಭವಿಷ್ಯ ಮತ್ತು ಶಾಲೆಯ ಖ್ಯಾತಿ ಹಾಳಾಗುತ್ತದೆ ಎಂದು ಹೇಳಿದ್ದರು. ಅದಾದ ಬಳಿಕವೂ ಎರಡು ದಿನ ಕಾದೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ನಂತರ ಮತ್ತೆ ಚಾಲಕ ಕರೆ ಮಾಡಿ ಮಗಳನ್ನು ಶಾಲಾ ವಾಹನದಲ್ಲಿ ಕಳುಹಿಸುವಂತೆ ಕೇಳಿದಾಗ ಅವನ ಮೇಲೆ ಕೋಪಗೊಂಡೆ. ಈ ವೇಳೆ ಚಾಲಕ ನಮ್ಮ ಮೇಲೆ ದೌರ್ಜನ್ಯ ಎಸಗಿ ಅಪಹರಣದ ಬೆದರಿಕೆ ಹಾಕಿದ್ದಾನೆ. ಇಷ್ಟದರೂ ಶಾಲೆಯ ಆಡಳಿತ ಮಂಡಳಿ ಆತನ ವಿರುದ್ಧ ದೂರು ನೀಡದಂತೆ ಮನವಿ ಮಾಡಿದೆ. ಈ ಬಗ್ಗೆ ನನ್ನ ಬಳಿ ಎಲ್ಲಾ ಸಾಕ್ಷಿಗಳಿವೆ ಎಂದು ಬಾಲಕಿಯ ತಾಯಿ ತಿಳಿಸಿದ್ದಾರೆ. ಇದನ್ನೂ ಓದಿ: ಬಿಆರ್‌ಟಿ ಅರಣ್ಯದಲ್ಲಿ ಪ್ರವಾಸಿಗರಿಗೆ ತಾಯಿ ಚಿರತೆ, ಎರಡು ಮರಿಗಳ ದರ್ಶನ
ತಾಯಿ ನೀಡಿದ ದೂರಿನ ಆಧಾರದ ಮೇಲೆ ಚಾಲಕನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದ ಕುರಿತು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುವುದಾಗಿ ಡಿಸಿಪಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪಾಟ್ನಾ ಆಸ್ಪತ್ರೆಯಲ್ಲಿ ಐಸಿಯುಗೆ ನುಗ್ಗಿ ಗ್ಯಾಂಗ್‌ಸ್ಟರ್ ಹತ್ಯೆ – ಐವರು ಆರೋಪಿಗಳು ಕೋಲ್ಕತ್ತಾದಲ್ಲಿ ಅರೆಸ್ಟ್