ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 400 ಬಸ್ಸು ಸೇರ್ಪಡೆ

1 Min Read

ವಿಜಯಪುರ: ಇಂದು ವಿಜಯಪುರದಲ್ಲಿ 112 ನಗರ ಸಾರಿಗೆ ವಾಹನಗಳಿಗೆ ಚಾಲನೆ ನೀಡಲಾಯಿತು. ಪ್ರಸಕ್ತ ವರ್ಷದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆಗೆ (Kalyana Karnataka Road Transport Corporation) 400 ಹೊಸ ಬಸ್ಸುಗಳನ್ನು ಸೇರ್ಪಡೆಗೊಳಿಸಲು ಈಗಾಗಲೇ ಕಾರ್ಯಾದೇಶ ನೀಡಲಾಗಿದೆ.

ಇಂದು ಚಾಲನೆ ನೀಡಲಾದ ಒಟ್ಟು 112 ನೂತನ ನಗರ ಸಾರಿಗೆ ಬಸುಗಳನ್ನು(Bus) ನಗರ ಭೂ ಸಾರಿಗೆ ನಿರ್ದೇಶನಾಲಯ, (Directorate of Urban Land Transport (DULT)) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಯೋಜನೆ ಯಡಿಯಲ್ಲಿ ಸೇರ್ಪಡೆ ಮಾಡಲಾಗಿದೆ. ಈ ವಾಹನಗಳನ್ನು ವಿಜಯಪುರ ವಿಭಾಗಕ್ಕೆ 27, ವಿಜಯನಗಕ್ಕೆ 25, ಕಲಬುರಗಿಗೆ 25, ರಾಯಚೂರಿಗೆ 18, ಬಳ್ಳಾರಿಗೆ 10, ಬೀದರಿಗೆ 4 ಮತ್ತು ಯಾದಗಿರಿಗೆ 3 ಹಂಚಿಕೆ ಮಾಡಲಾಗಿದೆ. ಇದನ್ನೂ ಓದಿ: ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಕೆಶಿ

 

 

ಕಲ್ಯಾಣ ಕರ್ನಾಟಕ ಭಾಗಕ್ಕೆ 56 ಪ್ರತಿಷ್ಠಿತ ವಾಹನಗಳ ಸೇರ್ಪಡೆ ಮಾಡಲಾಗುತ್ತಿದ್ದು, ಕಾರ್ಯಾದೇಶ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೊಸದಾಗಿ 56 ಪ್ರತಿಷ್ಠಿತ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದ್ದು, ಅದರಲ್ಲಿ 20 ಎಸಿ ಸ್ಲೀಪರ್, 20 ನಾನ್ ಎಸಿ ಸ್ಲೀಪರ್ ಮತ್ತು 16 ಎಸಿ ಸೀಟರ್ ವಾಹನಗಳಾಗಿರುತ್ತದೆ.

ಮುಂದಿನ ದಿನಗಳಲ್ಲಿ ಕ.ಕ.ರ.ಸಾ. ನಿಗಮಕ್ಕೆ ಹೊಸದಾಗಿ 225 ವಿದ್ಯುತ್ ಚಾಲಿತ ವಾಹನಗಳನ್ನು ಸೇರಿಸಲಾಗುತ್ತಿದ್ದು, ಕಲಬುರ್ಗಿ ಜಿಲ್ಲೆಗೆ 100, ವಿಜಯಪುರ ಜಿಲ್ಲೆಗೆ 75 ಮತ್ತು 50 ಬಸ್ಸುಗಳನ್ನು ಬಳ್ಳಾರಿಗೆ ನೀಡಲು ತೀರ್ಮಾನಿಸಲಾಗಿದೆ.

Share This Article