ಸೌದಿಯಲ್ಲಿ ಭೀಕರ ಬಸ್‌ ದುರಂತ – 42 ಭಾರತೀಯ ಹಜ್‌ ಯಾತ್ರಿಕರು ಸಜೀವ ದಹನ

Public TV
1 Min Read

ಮೆಕ್ಕಾ: ಮೆಕ್ಕಾದಿಂದ (Mecca) ಮದೀನಾಗೆ (Madina) ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಿಕರು ಸಜೀವ ದಹನವಾಗಿದ್ದಾರೆ.

ಸೌದಿ ಅರೇಬಿಯಾದ ಮೆಕ್ಕಾ ಬಳಿಯ ಅಲ್ ಮುಫ್ರಿಹಾತ್‌ನಲ್ಲಿ ಈ ಘಟನೆ ನಡೆದಿದೆ. ಸಾವನ್ನಪ್ಪಿದರ ಪೈಕಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು, ಮಕ್ಕಳಿದ್ದಾರೆ. ಮೃತಪಟ್ಟವರು ಹೈದರಾಬಾದ್‌ ಮೂಲದವರು ಎನ್ನಲಾಗುತ್ತಿದೆ.

 

ಮೆಕ್ಕಾದಲ್ಲಿ ತಮ್ಮ ಉಮ್ರಾ ವಿಧಿಗಳನ್ನು ಪೂರ್ಣಗೊಳಿಸಿ ಮದೀನಾಕ್ಕೆ ತೆರಳುತ್ತಿದ್ದಾಗ ಪ್ರವಾಸಿಗರ ಬಸ್ಸಿಗೆ ಡಿಸೇಲ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆಬೆಂಕಿಹೊತ್ತಿಕೊಂಡಿದೆ. ಸೋಮವಾರ ನಸುಕಿನ ಜಾವ 1: 30ಕ್ಕೆ ಘಟನೆ ನಡೆದಾಗ ಪ್ರಯಾಣಿಕರು ನಿದ್ದೆಯಲ್ಲಿದ್ದರು. ಹೀಗಾಗಿ ಸಾವು ನೋವಿನ ಸಂಖ್ಯೆ ಹೆಚ್ಚಾಗಿದೆ.

ಅಪಘಾತದಲ್ಲಿ ಎಷ್ಟು ಜನರು ಮೃತಪಟ್ಟಿದ್ದಾರೆ ಮತ್ತು ಎಷ್ಟು ಜನರು ಬದುಕುಳಿದಿದ್ದಾರೆ ಎಂಬುದರ ಕುರಿತು ಅಧಿಕಾರಿಗಳು ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಪ್ರಯಾಣಿಕರೊಬ್ಬರನ್ನು ರಕ್ಷಿಸಲಾಗಿದೆ. ವಾಹನ ಸಂಪೂರ್ಣವಾಗಿ ಸುಟ್ಟುಹೋಗಿದ್ದರಿಂದ ಶವಗಳನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ.

Share This Article