ಇಂದು 48 ಪಾಸಿಟಿವ್, ಶೂನ್ಯ ಮರಣ ದಾಖಲು

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 48 ಕೋವಿಡ್ ಕೇಸ್‌ಗಳು ಪತ್ತೆಯಾಗಿದ್ದು, ಶೂನ್ಯ ಮರಣ ಪ್ರಕರಣ ದಾಖಲಾಗಿದೆ.

ಬೆಂಗಳೂರು ನಗರದಲ್ಲಿ 40, ಬೆಂಗಳೂರು ಗ್ರಾಮಾಂತರ 3, ಬೆಳಗಾವಿ 3, ಚಿಕ್ಕಮಗಳೂರು 1 ಹಾಗೂ ಯಾದಗಿರಿಯಲ್ಲಿ 1 ಕೋವಿಡ್ ಕೇಸ್ ದಾಖಲಾಗಿದೆ.

ಇಲ್ಲಿಯವರೆಗೆ 40,057 ಮರಣ ಪ್ರಕರಣಗಳು ವರದಿಯಾಗಿದೆ. ಪಾಸಿಟಿವಿಟಿ ರೇಟ್ ಶೇ.0.57 ಇದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,408ಕ್ಕೆ ಇಳಿದಿದೆ. ಇಂದು ಒಟ್ಟು 86 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದನ್ನೂ ಓದಿ: ರಷ್ಯಾ ತೈಲ ಖರೀದಿ ಯಾಕೆ – ವಿದೇಶಿ ಪತ್ರಕರ್ತನಿಗೆ ಪಾಠ ಮಾಡಿ ಉತ್ತರ ಕೊಟ್ಟ ಜೈಶಂಕರ್

ಈವರೆಗೆ ರಾಜ್ಯದಲ್ಲಿ ಒಟ್ಟು 6,57,14,448 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇಲ್ಲಿ ವರೆಗೆ ಒಟ್ಟು 39,04,577 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಒಟ್ಟು 8,332 ಸ್ಯಾಂಪಲ್(ಆರ್‌ಟಿಪಿಸಿಆರ್ 3,333+4,999 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ನಾ ತಿನ್ನಲ್ಲ, ತಿನ್ನಲು ಬಿಡುವುದಿಲ್ಲ ಎಂದಿದ್ದ ಪ್ರಧಾನಿ ಮೋದಿ ಏನ್ಮಾಡ್ತಿದ್ದಾರೆ: ನಾಸೀರ್ ಹುಸೇನ್ ಪ್ರಶ್ನೆ

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಕರ್ನಾಟಕದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಿಕ್ಕಮಗಳೂರು ಹಾಗೂ ಯಾದಗಿರಿಯನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲೂ ಶೂನ್ಯ ಪ್ರಕರಣಗಳು ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *