ಬರೋಬ್ಬರಿ 5 ಕೋಟಿ ಮೌಲ್ಯದ ದಾಖಲೆ ಇಲ್ಲದ ಚಿನ್ನಾಭರಣ ವಶಕ್ಕೆ

Public TV
1 Min Read

ಧಾರವಾಡ: ಸೂಕ್ತ ದಾಖಲೆಗಳಿಲ್ಲದೇ ಸಾಗಿಸಲಾಗುತ್ತಿದ್ದ ಬರೋಬ್ಬರಿ 5 ಕೋಟಿ ರೂ. ಮೌಲ್ಯದ 7 ಕೆಜಿ 700 ಗ್ರಾಂ ತೂಕದ ಚಿನ್ನಾಭರಣಗಳನ್ನು (Gold Jewellery) ಧಾರವಾಡ (Dharwad) ಹೊರವಲಯದ ತೇಗೂರು ಚೆಕ್ ಪೋಸ್ಟ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಹಣ ವರ್ಗಾವಣೆ ಸೇರಿದಂತೆ ಇತ್ಯಾದಿ ಚಟುವಟಿಕೆಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿರಿಸಿ ಚೆಕ್ ಪೋಸ್ಟ್ ತೆರೆದಿದ್ದಾರೆ. ಧಾರವಾಡ-ಬೆಳಗಾವಿ ರಸ್ತೆಯ ತೇಗೂರು ಚೆಕ್ ಪೋಸ್ಟ್‌ನಲ್ಲಿ ಇದೀಗ ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಇದು ನನ್ನ ಕೊನೇ ಚುನಾವಣೆ, 1 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ – ನಾಮಪತ್ರ ಸಲ್ಲಿಸಿ ಸಿದ್ದು ಮನವಿ

ಬೆಳಗಾವಿ ಕಡೆಯಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಬಿವಿಸಿ ಎಂಬ ಲಾಜಿಸ್ಟಿಕ್ ವಾಹನದಲ್ಲಿ ಈ ಚಿನ್ನಾಭಾರಣ ಸಾಗಿಸಲಾಗುತ್ತಿತ್ತು. ಮಲಬಾರ್, ಜೋಯಾಲುಕಾಸ್, ಕಲ್ಯಾಣ್ ಜ್ಯುವೆಲರ್ಸ್ ಸೇರಿದಂತೆ ಇತರ ಚಿನ್ನಾಭರಣಗಳನ್ನು ಗರಗ ಠಾಣೆ ಪೊಲೀಸರು ವಶಪಡಿಸಿಕೊಂಡು ಆದಾಯ ಮತ್ತು ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ: ಜನರಲ್ಲಿ ಸುದೀಪ್‌ ಮನವಿ

Share This Article