– ಮೌಲಾನಾ ತೌಕೀರ್ ರಝಾ ಖಾನ್ ಸೇರಿ 50 ಮಂದಿ ವಶಕ್ಕೆ
ಲಕ್ನೋ: ‘ಐ ಲವ್ ಮುಹಮ್ಮದ್’ (I Love Muhammad) ಪೋಸ್ಟರ್‌ಗಳ ಮೇಲಿನ ಆಡಳಿತಾತ್ಮಕ ಕ್ರಮವನ್ನು ವಿರೋಧಿಸಿ ಶುಕ್ರವಾರದ ಪ್ರಾರ್ಥನೆಯ ನಂತರ ಉತ್ತರ ಪ್ರದೇಶದ ಬರೇಲಿಯಲ್ಲಿ (Bareilly) ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಇತ್ತೆಹಾದ್-ಎ-ಮಿಲ್ಲತ್ ಕೌನ್ಸಿಲ್ ಮುಖ್ಯಸ್ಥ ಮೌಲಾನಾ ತೌಕೀರ್ ರಝಾ ಖಾನ್ (Maulana Tauqeer Raza) ಸೇರಿದಂತೆ ಐವತ್ತು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.
ಹಿಂಸಾಚಾರಕ್ಕೆ ಐದು ದಿನ ಮೊದಲೇ ಸಂಚು ನಡೆದಿತ್ತು ಎಂದು ಪೊಲೀಸರ ಆರಂಭಿಕ ತನಿಖೆಯಲ್ಲಿ ತಿಳಿದು ಬಂದಿದೆ. ಪಿತೂರಿಯಲ್ಲಿ ಭಾಗಿಯಾಗಿರುವ ಎಲ್ಲಾ ವ್ಯಕ್ತಿಗಳನ್ನು ಗುರುತಿಸಿರುವ ಪೊಲೀಸರು, ಗಲಭೆಕೋರರು ಮತ್ತು ಅಶಾಂತಿಯಲ್ಲಿ ಭಾಗಿಯಾಗಿರುವ ಸಂಘಟಕರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ವಿಚಾರಣೆಗೆ ಒಳಪಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ‘ಐ ಲವ್ ಮುಹಮ್ಮದ್’ಗೆ ಟಕ್ಕರ್ – ಬಿಜೆಪಿ ಯುವ ಮೋರ್ಚಾದಿಂದ `ಐ ಲವ್ ಯೋಗಿ ಆದಿತ್ಯನಾಥ್’, `ಐ ಲವ್ ಬುಲ್ಡೋಜರ್’ ಕ್ಯಾಂಪೇನ್
ಹೆಚ್ಚುವರಿಯಾಗಿ ಎಲ್ಲಾ ಶಂಕಿತರ ಕರೆ ವಿವರ ದಾಖಲೆಗಳ ಪರಿಶೀಲನೆಗೆ ಮುಂದಾದ ಪೊಲೀಸರು, ಘರ್ಷಣೆಗಳು ನಡೆದ ಪ್ರದೇಶಗಳಿಂದ ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಗಲಭೆಕೋರರನ್ನು ಗುರುತಿಸುತ್ತಿದ್ದಾರೆ. ಅಲ್ಲದೇ ನಗರದ ಮೂರರಿಂದ ನಾಲ್ಕು ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆ ಆರಂಭಿಸಿದ್ದಾರೆ. ಇದನ್ನೂ ಓದಿ: ಯುಪಿಯಲ್ಲಿ ‘ಐ ಲವ್ ಮುಹಮ್ಮದ್’ ವಿವಾದ ಉಲ್ಬಣ – ಪ್ರತಿಭಟನೆ ವೇಳೆ ಕಲ್ಲೆಸೆತ, ಪೊಲೀಸರಿಂದ ಲಾಠಿಚಾರ್ಜ್
ಘಟನೆಯ ಬಳಿಕ ಬರೇಲಿಯಲ್ಲಿ ಮಾರುಕಟ್ಟೆಗಳು ಮುಚ್ಚಲ್ಪಟ್ಟಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. ವದಂತಿಗಳನ್ನು ನಂಬಬೇಡಿ ಮತ್ತು ಶಾಂತಿಯನ್ನು ಕಾಪಾಡಿಕೊಳ್ಳುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ದಾವಣಗೆರೆ | ದೇವಸ್ಥಾನದ ಮುಂದೆ ತಲ್ವಾರ್ ಹಿಡಿದು ಓಡಾಡಿದ ಅನ್ಯಕೋಮಿನ ಯುವಕ – ವೀಡಿಯೋ ವೈರಲ್
ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶವನ್ನು ಯಾರು ಆಳುತ್ತಿದ್ದಾರೆ ಎಂದು ಮೌಲಾನ ಮರೆತಿದ್ದಾರೆ. ಅವರು ನಗರವನ್ನು ತಡೆಯುವುದಾಗಿ ಬೆದರಿಕೆ ಹಾಕುತ್ತಿದ್ದರು. 2017ಕ್ಕಿಂತ ಮುಂಚೆ ಇಂತಹ ಘಟನೆಗಳು ಸಜಹವಾಗಿದ್ದವು, ನಾವು ಅಂಥವರಿಗೆ ಪಾಠವನ್ನು ಕಲಿಸಿದ್ದೇವೆ. ಅವರಿಗೆ ಅರ್ಥವಾಗುವ ಭಾಷೆಯಲ್ಲಿ ಉತ್ತರ ನೀಡುತ್ತಿದ್ದೇವೆ ಎಂದು ಖಾರವಾಗಿ ಉತ್ತರಿಸಿದ್ದಾರೆ. ಇದನ್ನೂ ಓದಿ: Madhya Pradesh | ತಾಯಿ ಎದುರೇ 5 ವರ್ಷದ ಮಗುವಿನ ಶಿರಚ್ಛೇದ