ಶ್ರೀನಗರ: ತ್ರಿಕೂಟ ಬೆಟ್ಟಗಳ ಮೇಲಿರುವ ಮಾತಾ ವೈಷ್ಣೋದೇವಿ ದೇಗುಲಕ್ಕೆ (Mata Vaishno Devi) ಹೋಗುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿ ಐವರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ.
ಈ ಘಟನೆಯ ನಂತರ ಜಮ್ಮು ಮತ್ತು ಕಾಶ್ಮೀರದ (Jammu Kashmir) ರಿಯಾಸಿ ಜಿಲ್ಲೆಯಲ್ಲಿರುವ ಈ ಪವಿತ್ರ ದೇವಾಲಯಕ್ಕೆ ತೀರ್ಥಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜಮ್ಮುವಿನಲ್ಲಿ ಭಾರೀ ಮಳೆ, ಭೂಕುಸಿಕ್ಕೆ ನಾಲ್ವರು ಬಲಿ – ವೈಷ್ಣೋದೇವಿ ಯಾತ್ರೆ ಸ್ಥಗಿತ
ಬೆಟ್ಟದ ತುದಿಯಲ್ಲಿರುವ ದೇವಾಲಯಕ್ಕೆ ಸುಮಾರು 12 ಕಿ.ಮೀ. ಪಾದಯಾತ್ರೆಯ ಅರ್ಧ ದಾರಿಯಲ್ಲೇ, ಮಧ್ಯಾಹ್ನ 3 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿದ ಅಧ್ಕ್ವರಿಯಲ್ಲಿರುವ ಇಂದರ್ಪ್ರಸ್ಥ ಭೋಜನಾಲಯದ ಬಳಿ ಬೃಹತ್ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಹಿಮಕೋಟಿ ಚಾರಣ ಮಾರ್ಗದ ಯಾತ್ರೆಯನ್ನು ಈಗಾಗಲೇ ದಿನಪೂರ್ತಿ ಸ್ಥಗಿತಗೊಳಿಸಲಾಗಿತ್ತು. ಮಧ್ಯಾಹ್ನ 1:30 ರ ವರೆಗೆ ಯಾತ್ರಿಕರು ಹಳೆಯ ಮಾರ್ಗದಲ್ಲಿಯೇ ಮುಂದುವರಿದರು. ಆದರೆ, ಧಾರಾಕಾರ ಮಳೆಯಿಂದಾಗಿ ಅಧಿಕಾರಿಗಳು ಅದನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದರು. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಮೇಘಸ್ಫೋಟ – ಹಠಾತ್ ಪ್ರವಾಹಕ್ಕೆ 10ಕ್ಕೂ ಹೆಚ್ಚು ಮನೆಗಳು ನಾಶ
ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ಸತತ ಮೂರು ದಿನಗಳ ಭಾರೀ ಮಳೆಯಿಂದಾಗಿ ಅಪಾರ ಹಾನಿಯಾಗಿದೆ. ಇಂದು ಮುಂಜಾನೆ ದೋಡಾ ಜಿಲ್ಲೆಯಲ್ಲಿ ಮೇಘಸ್ಫೋಟಕ್ಕೆ ನಾಲ್ವರು ಸಾವನ್ನಪ್ಪಿದ್ದು, 24 ಗಂಟೆಗಳಲ್ಲಿ ಒಟ್ಟು ಸಾವುಗಳ ಸಂಖ್ಯೆ 9 ಕ್ಕೆ ತಲುಪಿದೆ. ಹಠಾತ್ ತೀವ್ರವಾದ ಮಳೆಯಿಂದಾಗಿ ದಿಢೀರ್ ಪ್ರವಾಹ ಉಂಟಾಗಿ, ಈ ಪ್ರದೇಶದಲ್ಲಿ 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.