ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಐವರು ಉಗ್ರರು ಬಲಿ, ಇಬ್ಬರು ಸೈನಿಕರಿಗೆ ಗಾಯ

Public TV
1 Min Read

ಶ್ರೀನಗರ: ಭದ್ರತಾ ಪಡೆ (Security Force) ಮತ್ತು ಭಯೋತ್ಪಾದಕರ (Terrorits) ನಡುವೆ ನಡೆದ ಎನ್‌ಕೌಂಟರ್‌ನಲ್ಲಿ (Encounter) ಐವರು ಉಗ್ರರು ಬಲಿಯಾಗಿದ್ದು, ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu And Kashmir) ಕುಲ್ಗಾಮ್ (Kulgam) ಜಿಲ್ಲೆಯಲ್ಲಿ ನಡೆದಿದೆ.

ಬುಧವಾರ ರಾತ್ರಿ, ಜಿಲ್ಲೆಯ ಬೆಹಿಬಾಗ್ ಪ್ರದೇಶದ ಕಡ್ಡರ್‌ನಲ್ಲಿ ಶಂಕಿತ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿ ಪಡೆದ ತಕ್ಷಣ ಭದ್ರತಾ ಪಡೆ ಸಿಬ್ಬಂದಿ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಇದನ್ನೂ ಓದಿ: Mumbai Boat Accident | ಸ್ಪೀಡ್‌ ಬೋಟ್‌ ಫೆರ್ರಿಗೆ ಡಿಕ್ಕಿ ಹೊಡೆಯಲು ಕಾರಣ ಏನು? ದುರಂತ ಹೇಗಾಯ್ತು?

ಗುರುವಾರ ಮುಂಜಾನೆ ಭಯೋತ್ಪಾದಕರು ಏಕಾಏಕಿ ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ಚಕಮಕಿ ನಡೆಸಿ ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಈ ವೇಳೆ ಇಬ್ಬರು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ಮುಂದಿನ ಮೂರು ದಿನಗಳ ಕಾಲ ಭಾರೀ ಶೀತಗಾಳಿ – ಬೀದರ್‌ನಲ್ಲಿ ರೆಡ್ ಅಲರ್ಟ್ ಘೋಷಣೆ

Share This Article