50ಕ್ಕೂ ಹೆಚ್ಚು ದೇಶಗಳಿಗೆ ಮೇಡ್ ಇನ್ ಇಂಡಿಯಾ ಲಸಿಕೆ ರಫ್ತು- ಮೋದಿ

Public TV
2 Min Read

ನವದೆಹಲಿ: ಕೊರೊನಾ ಸಂಕಷ್ಟದ ಪರಿಸ್ಥಿತಿಯಲ್ಲಿ ಭಾರತ 150ಕ್ಕೂ ಹೆಚ್ಚು ದೇಶಗಳಿಗೆ ಔಷಧಿ ಹಾಗೂ ಇತರೆ ವೈದ್ಯಕೀಯ ಪರಿಕರಗಳನ್ನು ನೀಡಿದೆ. ಅಲ್ಲದೆ 50ಕ್ಕೂ ಹೆಚ್ಚು ದೇಶಗಳಿಗೆ ಮೇಡ್ ಇನ್ ಇಂಡಿಯಾ ಕೊರೊನಾ ಲಸಿಕೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಸ್ವೀಡನ್ ಪ್ರಧಾನಿ ಸ್ಟೀಫನ್ ಲೋಫ್ವೆನ್ ಅವರೊಂದಿಗೆ ವೀಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಪ್ಯಾರಿಸ್ ಒಪ್ಪಂದದಡಿ ಭಾರತ ತನ್ನ ಬದ್ಧತೆಯನ್ನು ಮುಂದುವರಿಸಲಿದೆ ಎಂದು ಹೇಳಿದರು.

ಕೊರೊನಾ ಸಂದರ್ಭದಲ್ಲಿ ಪ್ರಾದೇಶಿಕ ಹಾಗೂ ವಿಶ್ವ ಮಟ್ಟದಲ್ಲಿ ಸಹಕಾರದ ಮಹತ್ವವನ್ನು ನಾವು ಅರಿತಿದ್ದೇವೆ. ಹೀಗಾಗಿಯೇ ವಿಶ್ವವೇ ಕೊರೊನಾ ವಿರುದ್ಧ ಹೋರಾಡುತ್ತಿದ್ದಾಗ ಭಾರತ 150ಕ್ಕೂ ಹೆಚ್ಚು ದೇಶಗಳಿಗೆ ಔಷಧಿ ಹಾಗೂ ವೈದ್ಯಕೀಯ ಪರಿಕರಗಳನ್ನು ನೀಡಿದೆ. ಅಲ್ಲದೆ 50ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಮೇಡ್ ಇನ್ ಇಂಡಿಯಾ ಕೊರೊನಾ ಲಸಿಕೆ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆಯನ್ನು ವಿತರಿಸಲಿದ್ದೇವೆ ಎಂದರು.

ಸ್ವೀಡನ್‍ನಲ್ಲಿ ಈ ವಾರ ನಡೆದ ಹಿಂಸಾತ್ಮಕ ದಾಳಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಬೇಸರ ವ್ಯಕ್ತಪಡಿಸಿದ್ದು, ಸ್ವೀಡನ್ ಜನತೆಗೆ ಪರವಾಗಿ ಎಲ್ಲ ಭಾರತೀಯರು ಇದ್ದೇವೆ ಎಂದು ಒಗ್ಗಟ್ಟಿನ ಮಾತುಗಳನ್ನು ಆಡಿದ್ದಾರೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತಾರೆ ಎಂದು ಭಾವಿಸುತ್ತೇನೆ. ಭಾರತ ಮತ್ತು ಸ್ವೀಡನ್ ಪ್ರಜಾಪ್ರಭುತ್ವ, ಮಾನವ ಹಕ್ಕುಗಳು, ಕಾನೂನಿನ ನಿಯಮ, ಸಮಾನತೆ, ಸ್ವಾತಂತ್ರ್ಯ, ನ್ಯಾಯ ಸೇರಿದಂತೆ ಇತರ ವಿಷಯಗಳಲ್ಲಿ ಆಳವಾದ ಸಂಬಂಧವನ್ನು ಹೊಂದಿವೆ ಎಂದರು.

ಸ್ಮಾರ್ಟ್ ಸಿಟಿ, ವಾಟರ್ ಟ್ರೀಟ್‍ಮೆಂಟ್, ವೇಸ್ಟ್ ಮ್ಯಾನೇಜ್‍ಮೆಂಟ್, ಸಕ್ರ್ಯೂಲರ್ ಎಕಾನಮಿ, ಸ್ಮಾರ್ಟ್ ಗ್ರಿಡ್ಸ್, ಇ-ಮೊಬಿಲಿಟಿ, ಡಿಜಿಟಲ್ ಟ್ರಾನ್ಸ್ ಫಾರ್ಮೇಶನ್ ಸೇರಿದಂತೆ ವಿವಿಧ ವಲಯಗಳಲ್ಲಿನ ಸಹಭಾಗಿತ್ವದ ಬಗ್ಗೆ ಎರಡೂ ದೇಶಗಳ ನಾಯಕರು ಚರ್ಚಿಸಿದರು.

ಪ್ಯಾರಿಸ್ ಒಪ್ಪಂದದ ಬಗ್ಗೆ ಭಾರತದ ಬದ್ಧತೆಯನ್ನು ವಿವರಿಸಿದ ಅವರು, ಕಳೆದ ಐದು ವರ್ಷಗಳಲ್ಲಿ ಭಾರತದ ನವೀಕರಿಸಬಹುದಾದ ವಿದ್ಯುತ್ ಸಾಮಥ್ರ್ಯ ಶೇ.162 ರಷ್ಟು ಹೆಚ್ಚಾಗಿದೆ. ಭಾರತದ ಸಂಸ್ಕøತಿ ಯಾವಾಗಲೂ ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕುವ ಮಹತ್ವವನ್ನು ಒತ್ತಿ ಹೇಳುತ್ತದೆ. ಪ್ಯಾರಿಸ್ ಒಪ್ಪಂದದಡಿಯಲ್ಲಿ ಬದ್ಧತೆಯಿಂದ ಮುಂದೆ ಸಾಗುತ್ತೇವೆ. ಈ ಗುರಿಗಳನ್ನು ಸಾಧಿಸುವುದು ಮಾತ್ರವಲ್ಲ ಇವುಗಳನ್ನು ಮೀರಿಸುತ್ತೇವೆ. ಜಿ20 ದೇಶಗಳ ಪೈಕಿ ಭಾರತ ಹೊಂದಿದ ಗುರಿಗಳಲ್ಲಿ ಉತ್ತಮ ಪ್ರಗತಿ ಸಾಧಿಸಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *