– ಪೂಜಾರಿ ಮತ್ತು ಅವನ ಸಹಚರರಿಂದ ಕೃತ್ಯ
ಲಕ್ನೋ: 50 ವರ್ಷದ ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪದಡಿ ಪೂಜಾರಿ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.
ಭಾನುವಾರ ದೇವಸ್ಥಾನಕ್ಕೆ ತೆರಳಿದ್ದ 50 ಮಹಿಳೆಯ ಮೇಲೆ ಪೂಜಾರಿ ಸೇರಿದಂತೆ ಮೂವರು ಅತ್ಯಾಚಾರ ನಡೆಸಿ ಮಹಿಳೆಯನ್ನು ಕೊಲೆಗೈದಿದ್ದಾರೆ. ಈ ಮೂವರು ಆರೋಪಿಗಳಲ್ಲಿ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದ್ದು, ಪೂಜಾರಿ ಪರಾರಿಯಾಗಿದ್ದಾನೆ.
ಮರಣೋತ್ತರ ಪರೀಕ್ಷೆಯಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ ಎಂದು ತಿಳಿದು ಬಂದಿದೆ. ಆಕೆಯ ಖಾಸಗಿ ಅಂಗಗಳಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಸಂತ್ರಸ್ತೆಯ ಕುಟುಂಬದವರು ದೇವಸ್ಥಾನದ ಪೂಜಾರಿ ಮತ್ತು ಆತನ ಸಹಚರರ ವಿರುದ್ಧ ದೂರು ದಾಖಲಿಸಿದ್ದಾರೆ. ಆರೋಪಿಗಳಲ್ಲಿ ಇಬ್ಬರನ್ನು ಬಂಧಿಸಿದ್ದೇವೆ. ಆದರೆ ಪೂಜಾರಿ ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳನ್ನು ಪತ್ತೆ ಹಚ್ಚಲು ನಾಲ್ಕು ತಂಡಗಳನ್ನು ಮಾಡಿದ್ದೇವೆ. ಈ ಪ್ರಕರಣದ ಕುರಿತಾಗಿ ನಿರ್ಲಕ್ಷ್ಯ ತೋರಿದ ಅಧಿಕಾರಿಯೊಬ್ಬರನ್ನು ಅಮಾನತೊಗೊಳಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಕಲ್ಷ ಶರ್ಮಾ ಹೇಳಿದ್ದಾರೆ.