ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದ್ರೆ 500ರೂ. ದಂಡ- ಬಿಬಿಎಂಪಿ ಆಯುಕ್ತ ಎಚ್ಚರಿಕೆ

Public TV
1 Min Read

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಸರ್ಕಾರದಿಂದ ಮತ್ತೊಂದು ದಂಡ ಪ್ರಯೋಗ ಮಾಡಲಾಗಿದೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ (Tushar Girinath), ಎಲ್ಲೆಂದರಲ್ಲಿ ಕಸ ಬಿಸಾಡುವವರಿಗೆ ದಂಡ ಪ್ರಯೋಗ ಮಾಡಲಾಗುತ್ತದೆ. ಎಲ್ಲೆಂದರಲ್ಲಿ ಕಸ ಮತ್ತು ಸ್ವಚ್ಛತೆ ಕಾಪಾಡದವರಿಗೆ ದಂಡದ ಮೊತ್ತ 50 ರೂ. ನಿಂದ 500 ರೂ. ವರೆಗೆ ಏರಿಕೆ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಈ ಕುರಿತು ಆರೋಗ್ಯ ಇಲಾಖೆ ಸದ್ಯದಲ್ಲೇ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಿಗೂ ಆದೇಶ ಹೊರಡಿಸಲಿದೆ. ನಿನ್ನೆ ಆರೋಗ್ಯ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದರು. ಇದನ್ನೂ ಓದಿ: ಸಿಎಂ ಸರ್ಕಾರಕ್ಕೆ ಸೈಟ್ ವಾಪಸ್ ಕೊಡದಿದ್ದರೆ‌ ಭ್ರಷ್ಟಾಚಾರ ಚಿರಸ್ಥಾಯಿಯಾಗಿ ಉಳಿಯುತ್ತೆ: ಹೆಚ್. ವಿಶ್ವನಾಥ್

ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಗಿದೆ. ನಾಲ್ಕೈದು ದಿನಗಳಿಗೆ ನೀರು ಬದಲಾಯಿಸಬೇಕು. ರೈಟ್ ಅಪ್ ಕೊಡಿ ಅಂದಿದ್ದಾರೆ. ಆರ್‍ಡಬ್ಲ್ಯೂಎಸ್‍ಗೆ ಸಾಫ್ಟ್ ಕಾಪಿ ಕಳುಹಿಸಿದ್ದೀವಿ. ಆಶಾ ಕಾರ್ಯಕರ್ತರು ಬಂದಾಗ ಆರ್ ಡಬ್ಲ್ಯೂಡಿ ಅಂದರೆ ಅಪಾರ್ಟ್‍ಮೆಂಟ್ ನಿವಾಸಿಗಳು ಸ್ಪಂದಿಸಬೇಕು ಎಂದು ಹೇಳಿದರು.

Share This Article